
ವಸತಿ ಶಾಲೆಯಲ್ಲಿನ 7, 8, 9ನೇ ತರಗತಿಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
ಕರುನಾಡ ಬೆಳಗು ಸುದ್ದಿ
ವಿಜಯನಗರ, 27- ವಿಜಯನಗರ ಜಿಲ್ಲೆಯಲ್ಲಿನ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಲ್ಲಿ ಒಟ್ಟು 23 ವಸತಿ ಶಾಲೆಗಳು ಕಾರ್ಯನಿರ್ವಹಿಸುತ್ತಿದ್ದು, ಈ ವಸತಿ ಶಾಲೆಗಳಲ್ಲಿ 2024-25ನೇ ಸಾಲಿಗೆ 7, 8 ಮತ್ತು 9ನೇ ತರಗತಿಗಳಲ್ಲಿ ಖಾಲಿ ಇರುವ ಸ್ಥಾನಗಳನ್ನು ಜಿಲ್ಲಾ ಹಂತದಲ್ಲಿ ಪ್ರವೇಶ ಪರೀಕ್ಷೆಯ ಮೂಲಕ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
7ನೇ ತರಗತಿಯಲ್ಲಿ ಒಟ್ಟು 06 ಖಾಲಿ ಸ್ಥಾನಗಳು, 8ನೇ ತರಗತಿಯಲ್ಲಿ ಒಟ್ಟು 13 ಖಾಲಿ ಸ್ಥಾನಗಳು, 9ನೇ ತರಗತಿಯಲ್ಲಿ ಒಟ್ಟು 14 ಖಾಲಿ ಸ್ಥಾನಗಳು ಒಟ್ಟು 33 ಸ್ಥಾನಗಳು ಖಾಲಿ ಇರುತ್ತವೆ. ಪೌರ ಕಾರ್ಮಿಕರ, ಸಫಾಯಿ ಕರ್ಮಚಾರಿಗಳ, ಮ್ಯಾನುವೆಲ್ ಸ್ಖಾö್ಯವೆಂಜರ್, ಸ್ಮಶಾನ ಕಾರ್ಮಿಕರ, ದೇವದಾಸಿ ಸಮುದಾಯದ ಮಕ್ಕಳಿಗೆ ಪ್ರಥಮ ಆದ್ಯತೆ ನೀಡಲಾಗುವುದು.
ಸಮೀಪದ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಇಂದಿರಾಗಾAಧಿ, ಅಟಲ್ ಬಿಹಾರಿ ವಾಜಪೇಯಿ, ಡಾ. ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳಲ್ಲಿ ಅರ್ಜಿ ಪಡೆದು ಭರ್ತಿ ಮಾಡಿ ಈ ವಸತಿ ಶಾಲೆಗಳಲ್ಲಿ ಜುಲೈ 4ರೊಳಗೆ ಸಲ್ಲಿಸಬೇಕು.
ಪ್ರವೇಶ ಪರೀಕ್ಷೆ ಜುಲೈ 7ಕ್ಕೆ : ಜುಲೈ-07ರಂದು ಹಗರಿಬೊಮ್ಮನಹಳ್ಳಿ ತಾಲೂಕಿನ ಉಪನಾಯಕನಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1ರವರೆಗೆ ಪ್ರವೇಶ ಪರೀಕ್ಷೆ ನಡೆಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಮಂಜುನಾಥ ಹೆಚ್.ವಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.