
ವಾಲ್ಮೀಕಿ ನಿಗಮ ಅಕ್ರಮ ಸಿಎಂ ಕೂಡಲೇ ರಾಜೀನಾಮೆ ನೀಡಲಿ : ಶ್ರೀರಾಮುಲು
ಕರುನಾಡ ಬೆಳಗು ಸುದ್ದಿ
ಬಳ್ಳಾರಿ, 29- ರಾಜ್ಯದಲ್ಲಿ ಅತಿಹೆಚ್ಚಿನ ಪರಿಣಾಮದಲ್ಲಿ ನಡೆದ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ರೂಪಾಯಿಗಳ ಹಗರಣಕ್ಕೆ ಸಂಬಂಧಪಟ್ಟ, ನೈತಿಕ ಹೊಣೆಯನ್ನು ಹೊತ್ತು ರಾಜ್ಯದ ಮುಖ್ಯಮಂತ್ರಿಗಳು ಕೂಡಲೇ ರಾಜೀನಾಮೆ ನೀಡಬೇಕೆಂದು ಒತ್ತಾಯಿಸುತ್ತಾಯಿಸಿದ್ದಾರೆ.
ಮಾಜಿ ಸಚಿವ ಬಿಜೆಪಿ ಮುಖಂಡ ಬಿ ಶ್ರೀರಾಮುಲು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಧರಣಿಗೆ ಕೂತಿದ್ದಾರೆ.
ಶುಕ್ರವಾರದಂದು ಬಿಜೆಪಿ ಜಿಲ್ಲಾ ಘಟಕದ ನೇತೃತ್ವದಲ್ಲಿ ಈ ಹಗರಣದ ಬಗ್ಗೆ ಸಮಗ್ರ ವಿಚಾರಣೆ ನಡೆದು ಸಂಬಂಧ ಪಟ್ಟವರನ್ನು ಕೂಡಲೇ ಅರೆಸ್ಟ್ ಮಾಡಿ ನ್ಯಾಯ ವಿಚಾರಣೆ ನಡೆಸಬೇಕೆಂದು ಪ್ರತಿ ಘಟನೆ ಮಾಡಲಾಗಿತ್ತು.
ಮಾಜಿ ಸಚಿವ ಬಿ ಶ್ರೀರಾಮುಲು ಈ ಘಟನೆಗೆ ಸಂಬಂಧಪಟ್ಟ ಕೂಡಲೇ ಮುಖ್ಯಮಂತ್ರಿ ರಾಜೀನಾಮೆ ನೀಡಲು ಒತ್ತಾಯಿಸುತ್ತಾ ಶುಕ್ರವಾರದಿಂದ ಮೂರು ದಿನಗಳ ಕಾಲ ಧರಣಿ ನಿರಂತರವಾಗಿ ಹೋರಾಟ ಮಾಡುವುದಾಗಿ ತಿಳಿಸಿದರು.
ಶನಿವಾರ ಬಿಜೆಪಿ ನಾಯಕರು ಕಾರ್ಯಕರ್ತರು ಡಿಸಿ ಕಚೇರಿ ಮುಂದೆ ಗೋಮಗೂಡಿ ಸರ್ಕಾರ ವಿರುದ್ಧ ಘೋಷಣೆಗಳನ್ನು ಕೂಗಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ತಮ್ಮ ಮುಖ್ಯಮಂತ್ರಿಗಳು ರಾಜೀನಾಮೆ ನೀಡಲು ಒತ್ತಾಯಿಸಿದರು.