
ವಿಎಸ್‍ಕೆ ವಿಶ್ವವಿದ್ಯಾಲಯ : ಉಪಕುಲಪತಿಯಾಗಿ ಪ್ರೊ.ಕೆ.ಎಂ.ಮೇತ್ರಿ ನೇಮಕ
ಕರುನಾಡ ಬೆಳಗು ಸುದ್ದಿ
ಬಳ್ಳಾರಿ,7- ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಉಪಕುಲಪತಿಯಾಗಿ ಹಂಪಿ ಕನ್ನಡ ವಿಶ್ವ ವಿದ್ಯಾಲಯದ ಬುಡಕಟ್ಟು ಅಧ್ಯಯನ ವಿಭಾಗದ ಪ್ರಾಧ್ಯಾಪಕರಾದ ಪ್ರೊ.ಕೆ.ಎಂ.ಮೇತ್ರಿ ಅವರನ್ನು ನೇಮಕ ಮಾಡಿ ರಾಜ್ಯಪಾಲರ ಸಚಿವಾಲಯವು ಮಾರ್ಚ್ 05ರಂದು ಆದೇಶ ಹೊರಡಿಸಿತ್ತು.
ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಉಪಕುಲಪತಿಯಾಗಿ ಪ್ರೊ.ಕೆ.ಎಂ.ಮೇತ್ರಿ ಅಧಿಕಾರ ವಹಿಸಿಕೊಂಡರು.
ಪ್ರಭಾರ ಕುಲಪತಿಯಾಗಿದ್ದ ಪ್ರೊ.ವಿಜಯಕುಮಾರ್ ಬಿ.ಮಲಶೆಟ್ಟಿ ನೂತನ ಕುಲಪತಿಗಳಿಗೆ ಅಧಿಕಾರವನ್ನು ಹಸ್ತಾಂತರಿಸಿದರು.
ಪ್ರೊ.ಕೆ.ಎಂ.ಮೇತ್ರಿ ಅವರು ಮೂಲತಃ ಬೀದರ್ ಜಿಲ್ಲೆಯವರು. 33 ವರ್ಷಗಳ ಸುದೀರ್ಘ ಶೈಕ್ಷಣಿಕ ಅನುಭವ ಹೊಂದಿದ್ದಾರೆ. ಈ ಮೊದಲು ಹಂಪಿ ಕನ್ನಡ ವಿಶ್ವವಿದ್ಯಾಲಯದ ಪ್ರಭಾರ ಕುಲಪತಿಯಾಗಿ ಕಾರ್ಯನಿರ್ವಹಿಸಿದ್ದಾರೆ.