ವಿಕಲಚೇತನರ ಕಲ್ಯಾಣ ಇಲಾಖೆ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 03 – ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕೊಪ್ಪಳ ವತಿಯಿಂದ 2023-24ನೇ ಸಾಲಿಗೆ ವಿವಿಧ ಯೋಜನೆಗಳಡಿ ಅರ್ಹ ವಿಕಲಚೇತನ ಫಲಾನುಭವಿಗಳಿಂದ ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಿಸಲಾಗಿದೆ.
ಇಲಾಖೆಯ ಆಧಾರ ಯೋಜನೆ, ಮೆರಿಟ್ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಯೋಜನೆ, ಮರಣ ಪರಿಹಾರ ನಿಧಿ, ವೈದ್ಯಕೀಯ ಪರಿಹಾರ ನಿಧಿ, ಪ್ರತಿಭೆ ಯೋಜನೆ, ಸಾಧನೆ ಯೋಜನೆ, ನಿರುದ್ಯೋಗ ಭತ್ಯೆ, ಶಿಶುಪಾಲನಾ ಭತ್ಯೆ ಯೋಜನೆಗಳಿಗೆ ಅರ್ಹ ವಿಕಲಚೇತನರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಕ್ಟೋಬರ್ 31 ರವರೆಗೆ ಅವಕಾಶ ನೀಡಲಾಗಿತ್ತು. ಪ್ರಸ್ತುತ ಅರ್ಜಿ ಸಲ್ಲಿಕೆ ಅವಧಿಯನ್ನು ನವೆಂಬರ್ 15 ರವರೆಗೆ ವಿಸ್ತರಿಸಲಾಗಿದೆ.
ಫಲಾನುಭವಿಗಳು ಅರ್ಜಿಯನ್ನು ಸುವಿಧಾ ತಂತ್ರಾAಶ: https://suvidha.karnataka.gov.in/ ದಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ನಂತರ ಅರ್ಜಿ ಪ್ರತಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿ, ನಗರಾಭಿವೃದ್ಧಿ ಪ್ರಾಧಿಕಾರ ಕಾರ್ಯಾಲಯ ಆವರಣ, ಕೊಠಡಿ ಸಂಖ್ಯೆ 31, 32 ರಿಲಾಯನ್ಸ್ ಪೆಟ್ರೋಲ್ ಬಂಕ್ ಎದುರುಗಡೆ, ಹೊಸಪೇಟೆ ರಸ್ತೆ, ಕೊಪ್ಪಳ ಕಛೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಕೊಪ್ಪಳ, ಯಲಬುರ್ಗಾ, ಗಂಗಾವತಿ, ಕುಷ್ಟಗಿ ತಾಲೂಕಿನ ಎಂ.ಆರ್.ಡಬ್ಲೂ ಗಳು ಹಾಗೂ ಗ್ರಾಮ ಪಂಚಾಯತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿ.ಆರ್.ಡಬ್ಲೂ ಹಾಗೂ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಯು.ಆರ್.ಡಬ್ಲೂಗಳನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ:08539-200460 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!