
ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸೇವಾನಿರತ & ಬ್ಯಾಕ್‌ಲಾಗ್ ಹುದ್ದೆಗಳಿಗೆ ಲಿಖಿತ ಪರೀಕ್ಷೆ : ಎಸ್ಪಿ
ಕರುನಾಡ ಬೆಳಗು ಸುದ್ದಿ
ಹೊಸಪೇಟೆ (ವಿಜಯನಗರ ಜಿಲ್ಲೆ), ೦೭- ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಕಲ್ಯಾಣ ಕರ್ನಾಟಕ ಪ್ರದೇಶದ ಪೊಲೀಸ್ ಕಾನ್ಸ್‌ಟೇಬಲ್ (ಸಿವಿಲ್) (ಪುರುಷ & ಮಹಿಳಾ) (ತೃತೀಯ ಲಿಂಗ ಪುರುಷ ಮತ್ತು ಮಹಿಳಾ) ಹಾಗೂ ಸೇವಾನಿರತ & ಬ್ಯಾಕ್‌ಲಾಗ್-454 ಹುದ್ದೆಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುವುದು ಎಂದು ಜಿಲ್ಲೆ,ಯ ಪೊಲೀಸ್ ಅಧೀಕ್ಷಕರಾದ ಹರಿಬಾಬು,ಬಿ.ಎಲ್ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿದ್ದು ಹುದ್ದೆಗಳಿಗೆ ಲಿಖಿತ ಪರೀಕ್ಷೆಯನ್ನು ದಿನಾಂಕ: 10-12-2023 ರಂದು ಬೆಳಿಗ್ಗೆ 11.00 ರಿಂದ 12.30 ಗಂಟೆಯವರೆಗೆ ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಬೀದರ್ ಜಿಲ್ಲೆ, ಕಲಬುರಗಿ ನಗರ, ಕಲಬುರಗಿ ಜಿಲ್ಲೆ, ಯಾದಗಿರಿ ಜಿಲ್ಲೆ, ರಾಯಚೂರು ಜಿಲ್ಲೆ, ಕೊಪ್ಪಳ ಜಿಲ್ಲೆ, ಬಳ್ಳಾರಿ ಜಿಲ್ಲೆ, ಮತ್ತು ವಿಜಯನಗರ ಜಿಲ್ಲೆಗಳ ಪರೀಕ್ಷಾ ಕೆಂದ್ರಗಳಲ್ಲಿ ನಡೆಸಲಾಗುವುದು.
ಸದರಿ ಲಿಖಿತ ಪರೀಕ್ಷೆಗೆ ಅರ್ಹರಿರುವ ಅಭ್ಯರ್ಥಿಗಳಿಗೆ ಕರೆಪತ್ರದ ಬಗ್ಗೆ ಮುಂಬರುವ ದಿನಗಳಲ್ಲಿ ಎಸ್.ಎಂ.ಎಸ್ ಮೂಲಕ ಮಾಹಿತಿಯನ್ನು ನೀಡಲಾಗುವುದು ಹಾಗೂ ಕರೆಪತ್ರದ ಲಿಂಕ ಅನ್ನು ಸಹ ಕಳುಹಿಸಲಾಗುವುದು. ಅಭ್ಯರ್ಥಿಗಳು ಕರೆಪತ್ರವನ್ನು ಡೌನ್‌ಲೋಡ್ ಮಾಡಿಕೊಂಡು ನಿಗದಿಪಡಿಸಿದ ದಿನಾಂಕದಂದು ಲಿಖಿತ ಪರೀಕ್ಷೆಗೆ ಹಾಜರಾಗಲು ಸೂಚಿಸಿ, ವಿಜಯನಗರ ಜಿಲ್ಲೆ,ಯ ಪೊಲೀಸ್ ಅಧೀಕ್ಷಕರಾದ ಹರಿಬಾಬು,ಬಿ. ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.