IMG-20240227-WA0047

ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕು : ಎಸ್ ಡಿ ಎಂ ಸಿ ಅಧ್ಯಕ್ಷ ಕರಿಸಿದ್ದಪ್ಪ 

 

ಕರುನಾಡ ಬೆಳಗು ಸುದ್ದಿ 

ಯಲಬುರ್ಗಾ,28- ಪಾಲಕರು ತಮ್ಮ ಮಕ್ಕಳಿಗೆ ಆಸ್ತಿ ಮಾಡುವದಕ್ಕಿಂತ ಮಕ್ಕಳನೇ ಆಸ್ತಿಯನ್ನಾಗಿ ಮಾಡಬೇಕು ನಿಮ್ಮ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಕೂಡಿಸುವದು ಅವಶ್ಯಕತೆ ಇದೆ ಇಂದಿನ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೂ ಲಭ್ಯವಾಗಬೇಕು, ಎಂದು ಎಸ್ ಡಿ ಎಂ ಸಿ ಅಧ್ಯಕ್ಷ ಕರಿಸಿದ್ದಪ್ಪ ಬಳಿಗಾರ ಅವರು ಹೇಳಿದರು,

ತಾಲೂಕಿನ ಮುಧೋಳ ಗ್ರಾಮದ ಶ್ರೀ ಮತಿ ಮರಲಿಂಗಮ್ಮ ಕ ದೇಸಾಯಿ ಬಾಲಕಿಯರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಂದ ಸರಸ್ವತಿ ಪೂಜೆ ಹಾಗೂ 7 ನೇ ತರಗತಿ ವಿದ್ಯಾರ್ಥಿಗಳ ಬಿಳ್ಕೊಡುಗೆ ಕಾರ್ಯಕ್ರಮದ ಸಮಾರಂಭ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳು ಬಿಳ್ಕೋಡುಗೆ ಸಮಾರಂಭ ಅದ್ದೂರಿಯಾಗಿ ಜರುಗಿತು, ಬಾಲ್ಯ ಜೀವನದಲ್ಲಿ ಮಕ್ಕಳಿಗೆ ಉತ್ತಮ ಸಂಸ್ಕಾರ ನೆಡೆ. ನುಡಿ ಕಲಿಸುವದರ ಜೊತೆಗೆ ಮಕ್ಕಳ ಮನಸ್ಸು ಗೆಲುವ ಕ್ಷಣವನ್ನು ನೀಡುವ ಹೊಣೆಗಾರಿಕೆ ಪ್ರಾಥಮಿಕ ಶಾಲೆಯ ಶಿಕ್ಷಕರಿಗೆ ಇದೆ, ಆದ್ದರಿಂದ ಗ್ರಾಮೀಣ ಪ್ರದೇಶದ ಶಾಲೆಗಳು ರಾಷ್ಟ್ರ ಭವಿಷ್ಯವನ್ನು ನಿರ್ಣಯಿಸುವ ಶಕ್ತಿಯನ್ನು ಹೊಂದಿವೆ, ಗ್ರಾಮದ ಶಾಲೆಯ ಅಭಿವೃದ್ಧಿಗಾಗಿ ಸಹಕಾರ ನೀಡಲು ಸದಾಸಿದ್ದರಾಗಿರುವುದಾಗಿ ತಿಳಿಸಿದರು.

ಶಾಲೆಯ ಮುಖ್ಯೋಪಾಧ್ಯಯರಾದ ಬಸನಗೌಡ ದಾನಪ್ಪ ಗೌಡರ್ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಶಿಸ್ತು, ಸಮಯ ಪ್ರಜ್ಞೆ ಮತ್ತು ಜೀವನದಲ್ಲಿ ಯಶಸ್ವಿಗೊಳಿಸಲು ಆತ್ಮವಿಶ್ವಾಸ ಬಹಳ ಪ್ರಾಮುಖ್ಯವೆಂದು ವಿದ್ಯಾರ್ಥಿಗಳಿಗೆ ಕೆಲವು ನಿದರ್ಶನಗಳ ಮೂಲಕ ಶುಭನುಡಿಗಳನ್ನಾಡಿದರು.

ಸಾಯಂಕಾಲ 4 ಗಂಟೆಗೆ 7ನೇ ತರಗತಿ ವಿದ್ಯಾರ್ಥಿಗಳ ಬಿಳ್ಕೊಡುವ ಸಮಾರಂಭ ಕಾರ್ಯಕ್ರಮದಲ್ಲಿ ಒಂದನೇ ತರಗತಿಯಿಂದ 7ನೇ ತರಗತಿಯ ಮಕ್ಕಳೆಲ್ಲರೂ ಸೇರಿಕೊಂಡು ಸಾಂಸ್ಕೃತಿಕ ಕಾರ್ಯಕ್ರಮವು ನೆಡೆದವು, ಮಕ್ಕಳ ಪಾಲಕರು ಮಧ್ಯಾಹ್ನ 3 ಗಂಟೆಗೆ ಶಾಲೆಗೆ ಹಾಜರಾಗಿ ಮಕ್ಕಳನ್ನು ಸಂಸ್ಕೃತಿಕ ಕಾರ್ಯಕ್ರಮಕ್ಕೆ ತಯಾರಿಸಲು ಪಾಲಕರು ಮುಂದಾದರು, ಶಾಲೆಯಲ್ಲಿ ಮಧ್ಯಾಹ್ನದ ಉಪಹಾರದ ವ್ಯವಸ್ಥೆ ಮಾಡಿದರು, ಏಳನೇ ತರಗತಿ ವಿದ್ಯಾರ್ಥಿಗಳಿಂದ ಪ್ರಾರ್ಥನೆ ಗೀತೆ ಹೇಳಿದರು.

 

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ತಮ್ಮ ಅನಿಸಿಕೆ ಅಭಿಪ್ರಾಯವನ್ನು ವ್ಯಕ್ತಪಡಿಸಿದರು, ಶಿಕ್ಷಕರು ಬಸವರಾಜ್ ಹೆಚ್ ದಗಲಿ ಸ್ವಾಗತ ಭಾಷಣ ಮಾಡಿದರು.

 

ಕ್ರೀಡಾಕೂಟದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಿದರು, ಕಾರ್ಯಕ್ರಮದಲ್ಲಿ ಭೂ ದಾನಿಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಚಂದ್ರು ಹನಮಂತರಾವ್ ದೇಸಾಯಿ, ಎಸ್ ಡಿ ಎಂ ಸಿ ಉಪಾಧ್ಯಕ್ಷರಾದ ಶ್ರೀಮತಿ ಶೋಭಾ ಶರಣಪ್ಪ ಕುಂಡಿಹಾಳ, ಎಸ್‌ಡಿಎಂಸಿ ಸರ್ವ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಸರ್ವ ಸದಸ್ಯರು ಹಾಗೂ , ವಿವಿಧ ಶಾಲೆಯ ಎಲ್ಲಾ ಶಿಕ್ಷಕರು ಮತ್ತು ಶಿಕ್ಷಕಿಯರು ಹಾಗೂ ವಿದ್ಯಾರ್ಥಿಗಳು.ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು,

Leave a Reply

Your email address will not be published. Required fields are marked *

error: Content is protected !!