WhatsApp Image 2024-02-22 at 2.56.25 PM

ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಆಸಕ್ತಿ ವಹಿಸಬೇಕು : ಧರ್ಮಪ್ಪ ನಾಯಕ್

ಕರುನಾಡ ಬೆಳಗು ಸುದ್ದಿ

ಕುಕನೂರ,22- ವಿದ್ಯಾರ್ಥಿಗಳು ಪಠ್ಯದ ಜೊತೆ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ನೃತ್ಯ ಸಂಗೀತ ಸಾಹಿತ್ಯ ನಾಟಕ ವೇಷ ಭೂಷಣಗಳಂತ ಸ್ಪರ್ಧೆಗಳನ್ನು ವೇದಿಕೆಯಲ್ಲಿ ಮಾಡುವ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು ಎಂದು ಸರ್ಕಾರಿ ಮಾಧ್ಯಮಿಕ ಶಾಲೆಯ ಮುಖ್ಯ ಶಿಕ್ಷಕ ಧರ್ಮಪ್ಪ ನಾಯಕ್ ಹೇಳಿದರು.

ಪಟ್ಟಣದ ವಿದ್ಯಾನಗರದ ಸರ್ಕಾರಿ ಮಾಧ್ಯಮಿಕ ಶಾಲೆಯಲ್ಲಿ ಎಂಟನೇ ತರಗತಿ ವಿದ್ಯಾರ್ಥಿಗಳಿಗೆ ಬಿಳ್ಕೊಡುಗೆ ಸಮಾರಂಭ ಹಾಗೂ ವಾರ್ಷಿಕೋತ್ಸವ ಸಮಾರಂಭದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದವರು, ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಎಂಟನೇ ತರಗತಿಯ ವಿದ್ಯಾರ್ಥಿಗಳಿಗೆ ಬಿಳ್ಕೊಡುಗೆ ಸಮಾರಂಭ ಜೊತೆ ಜೊತೆಗೆ ಎಲ್ಲ ತರಗತಿಯ ವಿದ್ಯಾರ್ಥಿಗಳಿಗೆ ಸಾಂಸ್ಕೃತಿಕ ಚಟುವಟಿಕೆಗಳು ತಯಾರು ಮಾಡಿ ಪಾಲಕರನ್ನು ಕರೆತಂದು ಅವರವರ ಮಕ್ಕಳ ಕಾರ್ಯಕ್ರಮದಲ್ಲಿ ಭಾಗವಹಿಸಿಕೆಯನ್ನು ನೋಡಿ ಆನಂದಿಸಲು ಒಂದು ಸುದಿನ ತಮ್ಮ ತಮ್ಮ ಮಕ್ಕಳ ಪ್ರತಿಭೆಗಳ ಗುರುತಿಸುವ ಮತ್ತು ಖಾಸಗಿ ಶಾಲೆಗಳಂತೆ ಸರ್ಕಾರಿ ಶಾಲೆಯಲ್ಲೂ ಕೂಡ ಒಳ್ಳೆ ಒಳ್ಳೆ ಕಾರ್ಯಕ್ರಮಗಳು ನಡೆಯುತ್ತವೆ ಎಂದು ಜನರಲ್ಲಿ ಜಾಗೃತಿ ಮೂಡಿಸುವ ಒಂದು ವಿನೂತ ಕಾರ್ಯಕ್ರಮಗಳು ಜರಗಲಿವೆ ಎಂದರು.

ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಪ್ರವೀಣ್ ದಾಸ್, ವಕೀಲರಾದ ಅಡಿವೆಪ್ಪ ಬೋರಣ್ಣವರ್, ಹಿರಿಯ ಪತ್ರಕರ್ತ ರುದ್ರಪ್ಪ ಭಂಡಾರಿ , ಪತ್ರಕರ್ತ ಕಲಾವಿದ ಮುರಾರಿ ಭಜಂತ್ರಿ, ಕನಕರಾಯ ಭಜಂತ್ರಿ, ಶಿಕ್ಷಕರಾದ ವೀರನಗೌಡ ಪಾಟೀಲ್, ಗುಡುಷಾ ಗುಡಿಯಿಂದಲ್, ವೀಣಾ , ಸೇರಿದಂತೆ ಶಾಲಾ ಶಿಕ್ಷಕರು ವಿದ್ಯಾರ್ಥಿಗಳು ಎಸ್ ಡಿ ಎಮ್ ಸಿ ಸದಸ್ಯರು ಸಾರ್ವಜನಿಕರು ಇತರರು ಉಪಸ್ಥಿತರಿದ್ದರು..

Leave a Reply

Your email address will not be published. Required fields are marked *

error: Content is protected !!