
ಸರ್ಕಾರಿ ಪ್ರೌಢಶಾಲೆ ಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ವಿದ್ಯಾರ್ಥಿಗಳು ಧೈರ್ಯವಾಗಿ ಎದುರಿಸಿ ಬಿಇಓಹೆಚ್ ಗುರಪ್ಪ
ಕರುನಾಡ ಬೆಳಗು ಸುದ್ದಿ
ಸಿರುಗುಪ್ಪ,31 – ತಾಲೂಕು ಕರೂರು ಗ್ರಾಮದ ಅಗಸರ ದ್ಯಾವಪ್ಪ ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ವ್ಯಕ್ತಿತ್ವ ವಿಕಸನ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್ ಗುರ್ರಪ್ಪ ಅವರು ಮಾತನಾಡಿ ವಿದ್ಯಾರ್ಥಿಗಳು ಪರೀಕ್ಷೆಯನ್ನು ಧೈರ್ಯವಾಗಿ ಎದುರಿಸಿ ಎಂದು ಅವರು ಹೇಳಿದರು.
ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಲು ವಿಷಯಗಳು ಅಷ್ಟು ಸುಲಭ ವಾಗಿವೆ ಎಂದರು ಎಸ್ ಎಂ ಹಿರೇಮಠ ವ್ಯಕ್ತಿತ್ವ ವಿಕಸನ ಮತ್ತು ವಿದ್ಯಾರ್ಥಿಗಳ ಪರೀಕ್ಷಾ ಸಮಯದಲ್ಲಿ ಅನುಸರಿಸಬೇಕಾದ ನಿಯಮಾವಳಿ ಬಗ್ಗೆ ಅರುಣ್ ಕುಮಾರ್ ಗಣಿತ ವಿಷಯದಲ್ಲಿ ವಿವರವಾದ ಮಾಹಿತಿ ನೀಡಿದರು ಪತ್ರಕರ್ತ ಚಾಂದ್ ಬಾಷಾ ಮುಖ್ಯ ಗುರುಗಳು ಭಾಗ್ಯಮ್ಮ ಮಾತನಾಡಿದರು ಡಾ ಅಂಬೇಡ್ಕರ್ ವಸತಿ ನಿಲಯದ ಪ್ರಾಂಶುಪಾಲ ಖಾಸಿಂಸಾಬ್ ಬಿಸಿಎಂ ವಸತಿ ನಿಲಯದ ಮೇಲ್ವಿಚಾರಕ ಅಕ್ಬರ್ ಭಾಷಾ ಶಿಕ್ಷಕರು ವಿದ್ಯಾರ್ಥಿಗಳು ಇದ್ದರು.