
ಕರ್ನಾಟಕ ವಿಧಾನಸಭೆ ಮುಖ್ಯ ಸಚೇತಕರಾಗಿ
ಶಾಸಕ ದೊಡ್ಡನಗೌಡ ಪಾಟೀಲ ನೇಮಕ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, ೨೫- ಜಿಲ್ಲೆಯ ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲರನ್ನು ಕರ್ನಾಟಕ ವಿಧಾನಸಭೆ ಮುಖ್ಯ ಸಚೇತಕರನ್ನಾಗಿ ನೇಮಿಸಲಾಗಿದೆ.
ಈ ಕುರಿತು ನೇಮ ಮಾಡಿ ಆದೇಶ ಹೊರಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ,ವೈ, ವಿಜಯೇಂದ್ರ ರಾಷ್ಟ್ರೀಯ ಅಧ್ಯಕ್ಷ ಜೆ,ಪಿ ನಡ್ಡಾ ಅವರ ಸೂಚನೆ ಮೇರೆಗೆ ನೇಮಕ ಮಾಡಿದ್ದು ವಿಧಾನ ಸಭೆಯಲ್ಲಿ ತಮ್ಮ ಜವಾಬ್ದಾರಿಯನ್ನು ನಿರ್ವಹಿಸಿ ಸೇವೆ ಮಾಡುವಂತೆ ಸೂಚಿಸಿದ್ದಾರೆ.
ಡಬಲ್ ಧಮಾಕ ; ಜಿಲ್ಲೆಯ ಕುಷ್ಟಗಿ ತಾಲೂಕಿಗೆ ಬಿಜೆಪಿ ಪಕ್ಷ ಡಬಲ್ ಧಮಾಕ ನೀಡಿದ್ದು ಇತ್ತೀಚಿಗೆ ಶರಣು ತಳ್ಳಿಕೇರಿ ಅವರನ್ನು ಬಿಜೆಪಿ ರಾಜ್ಯ ಪ್ರದಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿದ್ದು. ಇಂದು ಶಾಸಕ ದೊಡ್ಡನಗೌಡ ಪಾಟೀಲ್ ಅವರನ್ನು ಮುಖ್ಯ ಸಚೇತಕರನ್ನಗಿ ನೇಮಕ ಮಾಡಿದ್ದಾರೆ.