2c136fae-be38-4577-97e1-318669006cc9

ವಿವಿಧ ವೃತ್ತಿಗಳಲ್ಲಿ 30 ದಿನಗಳ ತರಬೇತಿಗೆ ಅರ್ಜಿ ಆಹ್ವಾನ

ಕರುನಾಡ ಬೆಳಗು ಸುದ್ದಿ

ವಿಜಯನಗರ, 23- ವಿಜಯನಗರ ಜಿಲ್ಲೆಯ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್) ಹಾಗೂ ಕಲಬುರಗಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಇವರ ಸಂಯುಕ್ತಾಶ್ರಯದಲ್ಲಿ ಸ್ವಯಂ ಉದ್ಯಮಗಳನ್ನು ಪ್ರಾರಂಭಿಸಲು ಆಸಕ್ತರಿರುವವರಿಗೆ ವಿವಿಧ ವೃತ್ತಿಗಳಲ್ಲಿ 30 ದಿನಗಳ ನಿರ್ಧಿಷ್ಟ ವಲಯಾಧಾರಿತ ಉದ್ಯಮಶೀಲತಾಭಿವೃದ್ಧಿ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ.

ಜಿಲ್ಲೆಯ ಹೊಸಪೇಟೆಯಲ್ಲಿ ಕಂಪ್ಯೂಟರ್ ಹಾರ್ಡ್ವೇರ್ ಮತ್ತು ನೆಟ್‌ವರ್ಕಿಂಕ್ ತರಬೇತಿ, ಹರಪನಹಳ್ಳಿಯಲ್ಲಿ ಬ್ಯೂಟಿ ಪಾರ್ಲರ್ ಮ್ಯಾನೇಜ್‌ಮೆಂಟ್ ತರಬೇತಿ, ಹೂವಿನಹಡಗಲಿಯಲ್ಲಿ ಫ್ಯಾಷನ್ ಡಿಸೈನಿಂಗ್ ತರಬೇತಿ, ಕೂಡ್ಲಿಗಿಯಲ್ಲ್ಲಿ ಎಲೆಕ್ಟಿçಕಲ್ ಹೋಮ್ ಅಪ್ಲೆöÊಯನ್ಸ್ಸ್ ತರಬೇತಿ ಹಾಗೂ ಹಗರಿಬೊವ್ಮ್ಮನಹಳ್ಳಿಯಲ್ಲಿ ಮೋಬೈಲ್ ಫೋನ್ಸ್ ರಿಪೇರಿ ಮತ್ತು ಸರ್ವೀಸಿಂಗ್ ಬಗ್ಗೆ ತರಬೇತಿಗಳನ್ನು ಆಯೋಜಿಸಲಾಗಿದೆ.
ಈ ಕಾರ್ಯಕ್ರಮಗಳಲ್ಲಿ ಆಯಾ ವೃತ್ತಿಗಳಲ್ಲಿ ಪ್ರಾಯೋಗಿಕ ಹಾಗೂ ಸಿದ್ಧಾಂತದೊAದಿಗೆ ಸ್ವಯಂ ಉದ್ಯಮಗಳ ಬಗ್ಗೆ ಮಾಹಿತಿ, ಉದ್ಯಮಶೀಲತೆ, ಯಶಸ್ವಿ ಉದ್ಯಮಶೀಲರ ಗುಣಲಕ್ಷಣಗಳು, ಉದ್ಯಮಗಳನ್ನು ಪ್ರಾರಂಭಿಸುವ ಹಂತಗಳು, ಸ್ವಯಂ ಉದ್ಯೋಗಕ್ಕೆ ಇರುವ ಸರ್ಕಾರದ ಯೋಜನೆಗಳು, ಬ್ಯಾಂಕ್ ವ್ಯವಹಾರ ಮಾಡುವ ಬಗ್ಗೆ, ಸಾಲ, ಹಣಕಾಸು ಮತ್ತು ಹಣಕಾಸೇತರ ಸೌಲಭ್ಯಗಳ ಬಗ್ಗೆ, ಲೆಕ್ಕ ಪತ್ರ ನಿರ್ವಹಣೆ, ಯೋಜನಾ ವರದಿ ತಯಾರಿಕೆ, ಸಾಲ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸುವಲ್ಲಿ ಸಹಾಯ ನೀಡುವದು ಮತ್ತು ಸಂಬAಧಪಟ್ಟ ಇತ್ಯಾದಿ ವಿಷಯಗಳ ಬಗ್ಗೆ ಅನುಭವಿ ಅತಿಥಿ ಬೋಧಕರಿಂದ ಉಪನ್ಯಾಸ ಮಾಹಿತಿ ನೀಡಲಾಗುವದು.

ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಸಕ್ತರಿರುವ 18 ರಿಂದ 40 ವರ್ಷದೊಳಗಿನ, ಕನಿಷ್ಠ ಎಸ್ಸೆಸ್ಸೆಲ್ಸಿ ಪಾಸ್ ಆದ ಎಲ್ಲಾ ವರ್ಗದ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಮೊ:6362681190, 7204016012, 9986332736 ಇಲ್ಲಿಗೆ ಕರೆ ಮಾಡಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳ್ಳಬಹುದಾಗಿದೆ. 30 ಅಭ್ಯರ್ಥಿಗಳ ತಂಡದಲ್ಲಿ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ಶೇ.35 ರಷ್ಟು ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಶೇ.15 ರಷ್ಟು ಆದ್ಯತೆ ನೀಡಲಾಗುವುದು ಎಂದು ವಿಜಯನಗರದ ಸಿಡಾಕ್, ಜಂಟಿ ನಿರ್ದೇಶಕರಾದ ಜಿ. ಯು. ಹುಡೇದ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!