IMG_20231118_214213

 

ತಾಲೂಕ ಕ್ರೀಡಾಂಗಣದಲ್ಲಿ ನೇರ ಪ್ರಸಾರಕ್ಕೆ                              ಅವಕಾಶ

ಕರುನಾಡ ಬೆಳಗು ಸುದ್ದಿ
ಕೊಪ್ಪಳ,  18 –  ಗುಜರಾತ ರಾಜ್ಯದ ಅಹಮದಾಬಾದನಲ್ಲಿರುವ ಮೊಟೇರಾದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಏಕದಿನ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯಾವಳಿಯ ನೇರ ಪ್ರಸಾರವನ್ನು ಕೊಪ್ಪಳ ತಾಲ್ಲೂಕು ಕ್ರೀಡಾಂಗಣದಲ್ಲಿ ನವೆಂಬರ್ 19ರಂದು ಮಧ್ಯಾಹ್ನ 2 ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ಈ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯಾವಳಿಯನ್ನು ಉಚಿತವಾಗಿ ಉತ್ತಮವಾದ ಎಲ್.ಸಿ.ಡಿ ಸ್ಕೀನ್ ಹಾಗೂ ಸೌಂಡ್ ಸಿಸ್ಟಮ್‌ನೊಂದಿಗೆ ನೇರ ಪ್ರಸಾರ ಮಾಡಲಿದ್ದು ಕೊಪ್ಪಳ ಜಿಲ್ಲೆಯ ಕ್ರಿಕೆಟ್ ಅಭಿಮಾನಿಗಳು, ಕ್ರೀಡಾ ಆಸಕ್ತರು ಹಾಗೂ ಸಾರ್ವಜನಿಕರು ಆಗಮಿಸಿ ವೀಕ್ಷಣೆ ಮಾಡಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!