
ತಂಬಾಕು ತ್ಯಜಿಸಿ ಉತ್ತಮ ಸಮಾಜ ನಿರ್ಮಿಸಿ : ನ್ಯಾ. ರಮೇಶ್ ಬಾಬು
ಕರುನಾಡ ಬೆಳಗು ಸುದ್ದಿ
ವಿಜಯನಗರ, 1- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ, ಪೊಲೀಸ್ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ತಾಲೂಕು ಕಾನೂನು ಸೇವೆಗಳ ಪ್ರಾದಿಕಾರ, ಭಾರತಿಯ ದಂತ ವೈದ್ಯಕೀಯ ಸಂಘ ಹೊಸಪೇಟೆ ಮತ್ತು ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದ ಸಂಯುಕ್ತಾಶ್ರಯದಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆಯ ಅಂಗವಾಗಿ ಮೇ 31ರಂದು ಜಾಗೃತಿ ಜಾಥಾ ಕಾರ್ಯಕ್ರಮ ನಡೆಯಿತು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಅವರಣದಲ್ಲಿ ಜಾಥಾಕ್ಕೆ ಗೌರವಾನ್ವಿತ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಹೊಸಪೇಟೆ ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ರಮೇಶ್‌ಬಾಬು ಬಿ.ಎನ್ ಅವರು ಹಸಿರು ನಿಶಾನೆ ತೋರಿ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ಭಾರತವನ್ನು ತಂಬಾಕು ಮುಕ್ತ ದೇಶವನ್ನಾಗಿ ಮಾಡುವುದು, ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಜನರಿಗೆ ಅರಿವು ಮೂಡಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ‘ತಂಬಾಕು ಉದ್ಯಮದ ಹಸ್ತಕ್ಷೇಪದಿಂದ ಮಕ್ಕಳನ್ನು ರಕ್ಷಿಸಿ’ ಎಂಬುದು ಪ್ರಸ್ತುತ ವರ್ಷದ ಘೋಷವಾಕ್ಯವಾಗಿದೆ. ಅದರಂತೆ ಮಕ್ಕಳನ್ನು ತಂಬಾಕಿನಿAದ ದೂರವಿಡುವುದರಿಂದ ಸಮಾಜಕ್ಕೆ ಉತ್ತಮ ಪ್ರಜೆಗಳನ್ನು ನೀಡಬಹುದಾಗಿದೆ. ತಂಬಾಕು ಉತ್ಪಾದನೆಯಿಂದ ಅಂತ್ಯದವರೆಗೂ ಪರಿಸರಕ್ಕೆ ಹಾಗೂ ಮನುಷ್ಯರ ಆರೋಗ್ಯಕ್ಕೆ ಹಾನಿಯುಂಟು ಮಾಡುತ್ತಿದೆ. ಹಾಗಾಗಿ ಉತ್ತಮ ಸಮಾಜ, ಪರಿಸರ ಹಾಗೂ ಆರೋಗ್ಯಕ್ಕಾಗಿ ತಂಬಾಕು ತ್ಯಜಿಸಿ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಸದಾಶಿವ ಪ್ರಭು ಬಿ ಅವರು ಮಾತನಾಡಿ, ತಂಬಾಕು ಈ ಸಮಾಜಕ್ಕೆ ಒಂದು ಪಿಡುಗಾಗಿ ಪರಿಣಮಿಸಿದೆ. ವಿಶ್ವಸಂಸ್ಥೆಯು ಪತ್ರಿ ವರ್ಷ ತಂಬಾಕಿನ ದುಷ್ಪರಿಣಾಮಗಳ ಬಗ್ಗೆ ಜನರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ. ತಂಬಾಕು ಮಕ್ಕಳಿಗೆ ಆಕರ್ಷಣೆಯಾಗದಂತೆ ತಡೆದು ಅದರ ಬಗ್ಗೆ ಪರಿಣಾಮಕಾರಿಯಾಗಿ ಜಾಗೃತಿ ಮೂಡಿಸಬೇಕು. ವಿಶ್ವಸಂಸ್ಥೆಯ 6 ಅಂಶಗಳಾದ ತಂಬಾಕು ಬಳಕೆ ಮತ್ತು ತಡೆಗಟ್ಟುವ ನೀತಿಗಳನ್ನು ಮೇಲ್ವಿಚಾರಣೆ ಮಾಡುವುದು, ತಂಬಾಕು ಸೇವನೆಯಿಂದ ಜನರನ್ನು ರಕ್ಷಿಸುವುದು, ತಂಬಾಕು ಸೇವನೆಯನ್ನು ಬಿಡಲು ಜನರಿಗೆ ಸಹಾಯ ಮಾಡುವುದು, ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಪರಿಣಾಮಕಾರಿಯಾಗಿ ಜನರಿಗೆ ಜಾಗೃತಿ ಮೂಡಿಸುವುದು, ತಂಬಾಕು ಕುರಿತಾದ ಪ್ರಚಾರ ಮತ್ತು ಪ್ರಾಯೋಜಕತ್ವದ ಮೇಲೆ ಪರಿಣಾಮಕಾರಿಯಾಗಿ ನಿಷೇಧ ಹೇರುವುದು ಮತ್ತು ತಂಬಾಕು ಉತ್ಪನ್ನಗಳ ಮೇಲೆ ಹೆಚ್ಚಿನ ತೆರಿಗೆ ವಿಧಿಸುವ ಈ ಅಂಶಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಒಳ್ಳೆಯ ಫಲಿತಾಂಶ ಪಡೆಯಬೇಕಾಗಿದೆ ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಾಳಾದ ಡಾ.ಶಂಕರ್ ನಾಯ್ಕ್.ಎಲ್ ಅವರು ಮಾತನಾಡಿ, ಇತ್ತೀಚಿನ ದಿನಗಳಲ್ಲಿ 13 ರಿಂದ 18 ವರ್ಷದ ಮಕ್ಕಳು ತಂಬಾಕಿನ ದುಶ್ಚಟಕ್ಕೆ ಬಲಿಯಾಗುತ್ತಿದ್ದು ತಂಬಾಕು ಸಮಾಜದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ. ತಂಬಾಕು ನಿಯಂತ್ರಣ ಕೋಶದವತಿಯಿಂದ ಇಲ್ಲಿಯವರೆಗೂ ನಮ್ಮ ಜಿಲ್ಲೆಯಲ್ಲಿ 168 ಪ್ರಕರಣಗಳನ್ನು ದಾಖಲಿಸಿ 33,600 ರೂ. ದಂಡವನ್ನು ವಿಧಿಸಲಾಗಿದೆ. ತಂಬಾಕು ಸೇವನೆಯಿಂದ ಮೊದಲಿಗೆ ಯಾವುದೇ ಪರಿಣಾಮ ಕಾಣಿಸದಿದ್ದರು ಸತತ 15ರಿಂದ 20 ವರ್ಷಗಳ ಕಾಲ ಸೇವನೆ ಮಾಡಿದರೆ ಮಾರಣಾಂತಿಕ ರೋಗಕ್ಕೆ ತುತ್ತಾಗಬೇಕಾಗುತ್ತದೆ. ಇದರಿಂದಾಗಿ ಒಂದು ಕುಟುಂಬವೇ ಬೀದಿಗೆ ಬೀಳುವ ಪರಿಸ್ಥಿತಿ ಬರುತ್ತದೆ ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಗೌರವಾನ್ವಿತ ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪ್ರಶಾಂತ್ ನಾಗಲಾಪುರ್, ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಅಶೋಕ್ ಹೆಚ್.ಆರ್., ಎರಡನೇ ಸಿವಿಲ್ ನ್ಯಾಯಾಧೀಶರಾದ ಸಂಜೀವ್ ಕುಮಾರ.ಜಿ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಕಾರ್ಯಕ್ರಮ ಅಧಿಕಾರಿ ಡಾ.ಷಣ್ಮುಖ ನಾಯ್ಕ.ಬಿ., ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಎಂ.ಪಿ.ದೊಡ್ಡಮನಿ, ಜಿಲ್ಲಾ ರೋಗವಾಹಕ ಆಶಿತ ರೋಗಗಳ ನಿಯಂತ್ರಣಾಧಿಕಾರಿಗಳಾದ ಡಾ.ಕಮಲಮ್ಮ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳಾದ ಡಾ. ಜಂಬಯ್ಯ, ಜಿಲ್ಲಾ ಕುಟುಂಬ ಕಲ್ಯಾಣ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳಾದ ಡಾ.ವಿನಯ್, ಜಿಲ್ಲಾ ಕ್ಷಯರೊಗ ನಿರ್ಮೂಲಣಾಧಿಕಾರಿಗಳಾದ ಡಾ.ಜಗದೀಶ್ ಪಾಟ್ನಿ, ಜಿಲ್ಲಾ ಕುಷ್ಠರೋಗ ನಿರ್ಮೂಲಾಣಾಧಿಕಾರಿಗಳಾದ ಡಾ.ರಾಧಿಕಾ, ತಾಲೂಕು ಆರೋಗ್ಯಾಧಿಕಾರಿಗಳಾದ ಡಾ.ಭಾಸ್ಕರ್, ಸಮಾಜ ಕಾರ್ಯಕರ್ತರಾದ ಭೋಜರಾಜ ಎಸ್, ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದ ಪದಾಧಿಕಾರಿಗಳು, ಪೊಲೀಸರು, ಮಲ್ಲಿಗೆ ಇನ್ಸಿ÷್ಟಟ್ಯೂಟ್ ಆಫ್ ಮೆಡಿಕಲ್ ಸೈನ್ಸ್, ಸಪ್ತಗಿರಿ ಇನ್ಸಿ÷್ಟಟ್ಯೂಟ್ ಆಫ್ ನರ್ಸಿಂಗ್ ಸೈನ್ಸ್, ಹೀಮ ಇನ್ಸಿ÷್ಟಟ್ಯೂಟ್ ಆಫ್ ನರ್ಸಿಂಗ್ ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.