WhatsApp Image 2024-02-22 at 3.29.54 PM

ವೀರಪ್ಪ ನಿಂಗೋಜಿ ರವರ ಶಾಯಿರ ಕ್ರತಿ ದತ್ತಿ ಪ್ರಶಸ್ತಿಗೆ ಆಯ್ಕೆ

ಕರುನಾಡ ಬೆಳಗು ಸುದ್ದಿ

ಯಲಬುರ್ಗಾ,22- ಕೊಪ್ಪಳ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರು ಹಾಗೂ ತಾಲೂಕಿನ ಕರಮುಡಿ ಗ್ರಾಮದ ಹಿರಿಯ ಸಾಹಿತಿಗಳಾದ ವೀರಪ್ಪ ಮಲ್ಲಪ್ಪ ನಿಂಗೋಜಿ ರವರು 2022 ರಲ್ಲಿ ಪ್ರಕಟಿಸಿದ ” ಕರವೀರನ ಶಾಯಿರಿಗಳು” ಎಂಬ ಕ್ರತಿಗೆ ಕನ್ನಡ ಸಾಹಿತ್ಯ ಪರಿಷತ್ತು ಕೊಡ ಮಾಡುವ ಪ್ರತಿಷ್ಠಿತ ನಾ.ಕು. ಗಣೇಶ ದತ್ತಿ ಪ್ರಶಸ್ತಿಗೆ ಆಯ್ಕೆ ಆಗಿದೆ ಎಂದು ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಡಾ. ಪದ್ಮಿನಿ ನಾಗರಾಜು  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

               ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿರವರ ಅಧ್ಯಕ್ಷತೆಯಲ್ಲಿ ವಿಷಯ ತಜ್ಞರನ್ನನ್ನೊಳಗೊಂಡ ಸಮಿತಿಯು 2022 ರಲ್ಲಿ ಪ್ರಕಟಗೊಂಡ ವಿವಿಧ ದತ್ತಿ ಪ್ರಶಸ್ತಿಗೆ ಪುಸ್ತಕಗಳನ್ನು ಆಯ್ಕೆ ಮಾಡಲಾಗಿದೆ.

ನಿಂಗೋಜಿರವರು ತಾಲೂಕಾ ಕಸಾಪ ಗೌ.ಕಾರ್ಯದರ್ಶಿˌ ಅಧ್ಯಕ್ಷರಾಗಿ ಹಾಗೂ ಜಿಲ್ಲಾ ಕಸಾಪ ಗೌ.ಕಾರ್ಯದರ್ಶಿ ಹಾಗೂ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ಕನ್ನಡಮ್ಮನ ಸೇವೆಗೈದಿದ್ದಾರೆ.ಈಗಾಗಲೆ 8 ಕ್ರತಿಗಳನ್ನು ವಿವಿಧ ಪ್ರಕಾರಗಳಲ್ಲಿ ಪ್ರಕಟಿಸಿರುವ ನಿಂಗೋಜಿರವರಿಗೆ ಪ್ರಶಸ್ತಿ ಬಂದಿರುವದಕ್ಕೆ ಜಿಲ್ಲೆಯ ಸಾಹಿತಿಗಳು ಹರ್ಷವ್ಯಕ್ತಪಡಿಸಿದ್ದಾರೆ.

ಬರುವ ಮಾರ್ಚ 3 ಮತ್ತು 4 ಘಂಟೆಗೆ ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀ ಕ್ರಷ್ಣರಾಜ ಪರಿಷತ್ತಿನ ಮಂದಿರದಲ್ಲಿ ಪ್ರಶಸ್ತಿಯನ್ನು ವಿತರಿಸಲಾಗುವುದು ಎಂದು ಕಸಾಪ ಗೌರವ ಕಾರ್ಯದರ್ಶಿ ಡಾ. ಪದ್ಮಿನಿ ನಾಗರಾಜು ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!