
ಅಲ್ಪಸಂಖ್ಯಾತ ವಿದ್ಯಾರ್ಥಿಗಳ ವೃತ್ತಿಪರ ಕೋರ್ಸ್ಗಳಿಗೆ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
ಕರುನಾಡ ಬೆಳಗು ಸುದ್ದಿ
ವಿಜಯನಗರ, 27- 2024-25ನೇ ಸಾಲಿನ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಷಿಗಳು ಮತ್ತು ಆಂಗ್ಲೋ ಇಂಡಿಯನ್ ಸಮುದಾಯದ ವಿದ್ಯಾರ್ಥಿಗಳು ಸಿಇಟಿ-ನೀಟ್ ಮುಖಾಂತರ ವೃತ್ತಿಪರ ಕೋರ್ಸ್ಗಳಿಗೆ ಪ್ರವೇಶ ಪಡೆಯಬಯಸುವವರು ನಿಗಮದಿಂದ ಸಾಲ ಸೌಲಭ್ಯವನ್ನು ಒದಗಿಸಲು ಅನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವೃತ್ತಿಪರ ಕೋರ್ಸ್ಗಳಾದ ಎಂ.ಬಿ.ಬಿ.ಎಸ್, ಬಿ.ಡಿ.ಎಸ್, ಬಿ.ಆಯುಷ್, ಬ್ಯಾಚುಲರ್ ಆಪ್ ಆರ್ಚಿಟೆಕ್ಚರ್, ಬಿ.ಇ, ಬ್ಯಾಚುಲರ್ ಆಪ್ ಟೆಕ್ನಾಲಜಿ ಕೋರ್ಸ್ಸ್ ಪಾಮರ್ಸಿ, ಅಗ್ರಿಕಲ್ಚರ್ ಸೈನ್ಸ್, ವೆಟರ್ನರಿ ಮತ್ತು ಪಾರ್ಮ್ ಕೋರ್ಸ್ಗಳಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳು ನಿಗಮದ ವೆಬ್‌ಸೈಟ್: ಞmಜಛಿoಟಿಟiಟಿe.ಞಚಿಡಿಟಿಚಿಣಚಿಞಚಿ.gov.iಟಿ ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದು.
ಆನ್‌ಲೈನ್ ಅರ್ಜಿಯನ್ನು ಕಂಪ್ಯೂಟರ್‌ನಲ್ಲಿ ಭರ್ತಿ ಮಾಡಿದ ಅರ್ಜಿಯ ಪ್ರಿಂಟೌಟ್, ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ಪಿಯುಸಿ ಅಂಕಪಟ್ಟಿ, ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣಪತ್ರ, ಐಡಿ ಕಾರ್ಡ್, ರೇಷನ್ ಕಾರ್ಡ್, ವಿದ್ಯಾರ್ಥಿ ಮತ್ತು ಪಾಲಕರ 5 ಪಾಸ್‌ಪೋರ್ಟ್ ಸೈಜ್ ಪೋಟೋ, ಸಿಇಟಿ-ನೀಟ್ ಆಲ್ ಕಾಪೀಸ್ ಮತ್ತು ಪರೀಕ್ಷಾ ಪ್ರವೇಶ ಪತ್ರ, ನೋಟರಿ ಮಾಡಿಸಿದ ನಷ್ಟ ಪರಿಹಾರ ಬಾಂಡ್ ಈ ಎಲ್ಲಾ ದಾಖಲೆಗಳನ್ನು ಜಿಲ್ಲಾ ವ್ಯವಸ್ಥಾಪಕರ ಕಚೇರಿಯಲ್ಲಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಹೊಸಪೇಟೆಯ ತಾಲೂಕು ಕಚೇರಿಯಲ್ಲಿರುವ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಭೇಟಿ ನೀಡಿ ಅಥವಾ ಮೋ: 8277944207 ಗೆ ಸಂಪರ್ಕಿಸಬಹುದಾಗಿದೆ. ಎಂದು ವಿಜಯನಗರ ಜಿಲ್ಲೆಯ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.