ಯಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿ ಅವರು ರಾಜ್ಯದ ಜಲಸಂಪನ್ಮೂಲ ಸಚಿವ ಹಾಗೂ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಈ ಬಾರಿ ಬಜೆಟ್ ನಲ್ಲಿ ಯಲಬುರ್ಗಾ ಕ್ಷೇತ್ರಕ್ಕೆ 38 ಕೆರೆಗಳನ್ನು ತುಂಬಿಸುವ ಬೃಹತ್ ಯೋಜನೆಯನ್ನು ಸುಮಾರು 980 ಕೋಟಿ ವೆಚ್ಚದಲ್ಲಿ ಮಂಜೂರಾತಿ ಮಾಡಿಸಿರುವುದಕ್ಕೆ ಕ್ಷೇತ್ರದ ಸಮಸ್ತ ರೈತರ ಪರವಾಗಿ ಅಭಿನಂದನೆಗಳನ್ನು ಸಲ್ಲಿಸಿದರು.
