“ಶ್ರೀಮತಿ ಸುಜಾತ ಕುರಿ” ವರಿಗೆ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, ೦8- ನಗರದ ಸಾಹಿತ್ಯ ಭವನದಲ್ಲಿ ಜಿಲ್ಲಾ ಆಡಳಿತ ಜಿಲ್ಲಾ ಪಂಚಾಯತ್ ಮತ್ತು ಸಾರ್ವಜನಿಕ ಶಿಕ್ಷಣ ಸಾಕ್ಷರತಾ ಇಲಾಖೆ ಏರ್ಪಡಿಸಿದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಜರುಗಿತು.
ಈ ಸಂದರ್ಭದಲ್ಲಿ ಕೊಪ್ಪಳಜಿಲ್ಲೆಯ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ಬಹದ್ದೂರ್ ಬಂಡಿಯ” ಶ್ರೀಮತಿ ಸುಜಾತ ಕುರಿ”ಅವರಿಗೆ ಹಗೂ ಇತರರಿಗೆ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಶಾಸಕ ಕೆ ರಾಘವೇಂದ್ರ ಹಿಟ್ನಾಳ ವಿಧಾನ ಪರಿಷತ್ ಸದಸ್ಯರಾದ ಹೇಮಲತಾ ನಾಯಕ್ , ನಗರ ಸಭೆ ಅಧ್ಯಕ್ಷ ಅಮ್ಜದ ಪಟೇಲ್, ಕೊಪ್ಪಳ ನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀನಿವಾಸ ಗುಪ್ತ ನಗರಸಭೆ ಸದಸ್ಯರಾದ ಮುತ್ತಣ್ಣ ಕುಷ್ಟಗಿ,ನೌಕರರ ಸಂಘದ ಅಧ್ಯಕ್ಷ ನಾಗರಾಜ್ ಜುಮಣ್ಣನವರ್, ಶಾಲಾ ಉಪನಿರ್ದೇಶಕ ಸೋಮಶೇಖರ್ ಗೌಡ ಪಾಟೀಲ್ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹನುಮಂತಪ್ಪ ಹೆಚ್, ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಶಿವಪ್ಪ ಜೋಗಿ.
ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾದ ಶರಣಬಸನಗೌಡ ಪಾಟೀಲ್ ಕಾರ್ಯದರ್ಶಿ ಮಂಜುನಾಥ್, ಸಹ ಕಾರ್ಯದರ್ಶಿ ಬಸವರಾಜ್ ಕೊಮಲಾಪುರ, ತಾಲೂಕ ಅಧ್ಯಕ್ಷ ಹೊಳಿಬಸಯ್ಯ ಕೆ ಎಂ, ಕಾರ್ಯದರ್ಶಿ ಬಾಳಪ್ಪ ಕಾಳೆ, ಮತ್ತು ಪ್ರಾಣೇಶ್ ಪೂಜಾರಿ , ಪರಸಪ್ಪ ಕಮಲಿ, ದೇವರಾಜ್ ಎ .ಎಸ್. ಉರ್ದು ಸಂಘದ ಜಿಲ್ಲಾ ಅಧ್ಯಕ್ಷ ನಫೀಸ್ ಖಾನ್ ಪಠಾಣ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿ ವರ್ಗದವರು ಶಿಕ್ಷಕರ ಸಂಘದ ವಿವಿಧ ಪದಾಧಿಕಾರಿಗಳು, ಜಿಲ್ಲೆಯ ಎಲ್ಲಾ ಶಿಕ್ಷಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
