
ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ
ಹಂಗಾಮಿ ಕುಲಪತಿಯಾಗಿ ಪ್ರೊ.ಅನಂತ್ ನೇಮಕ
ಕರುನಾಡ ಬೆಳಗು ಸುದ್ದಿ
ಬಳ್ಳಾರಿ, ೦೮- ಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ನೂತನ ಹಂಗಾಮಿ ಕುಲಪತಿಯಾಗಿ ಸಮಾಜ ವಿಜ್ಞಾನ ನಿಕಾಯದಡೀನರು ಹಾಗೂ ಇತಿಹಾಸ ಮತ್ತು ಪುರಾತತ್ವ ವಿಭಾಗದ ಪ್ರಾಧ್ಯಾಪಕರಾದ ಪ್ರೊ.ಅನಂತ್ ಎಲ್ ಝಂಡೇಕರ್ ಅವರನ್ನು ನೇಮಕ ಮಾಡಿ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ.
ಸನ್ಮಾನ: ವೆಂಕಟೇಶ್ ಹೆಗಡೆ ವಕೀಲರು, ಮಾಜಿ ವಿದ್ಯಾ ವಿಷಯಕ ಪರಿಷತ್ ಸದಸ್ಯರು ರವರು ಇಂದು ಕಛೇರಿಯಲ್ಲಿ ಸನ್ಮಾನಿಸಿದರು.ಹಾಗೆಯೇ ವಿಶ್ವವಿದ್ಯಾಲಯದಲ್ಲಿ ಹೊರಗುತ್ತಿಗೆ ಮೇಲೆ ಕೆಲಸ ಮಾಡುತ್ತಿರುವ ನೌಕರರಿಗೆ ಬಾಕಿ ವೇತನ ನೀಡಲು ಕೋರಲಾಯಿತು, ಮತ್ತು ವಿಶ್ವವಿದ್ಯಾಲಯದ ಅಭಿವೃದ್ಧಿಗೆ ಹೆಚ್ಚಿನ ಹೊತ್ತನ್ನು ನೀಡಬೇಕೆಂದು ಮನವಿ ಮಾಡಲಾಯಿತು.
ಈ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ಬೋಧಕರಾದ ಪ್ರೊಫೆಸರ್ ಗೌರಿ ಮಾನಸ ಮತ್ತು ಮೋಹನ್ ದಾಸ್, ಹಾಗೂ ಸ್ನೇಹ ಸುಮ ಹೆಗಡೆ, ದೀಪಕ್, ರಾಜ ಮುಂತಾದವರು ಉಪಸ್ಥಿತರಿದ್ದರು.