
ಸಂವಿಧಾನ ಮತ್ತು ರಾಷ್ಟ್ರೀಯ ಐಕ್ಯತ ಸಮಾವೇಶ ಸಂವಿಧಾನ ಜಾಗೃತಿ ಜಾಥಾ ಬಳ್ಳಾರಿ ಜಿಲ್ಲೆಗೆ ರಾಜ್ಯಮಟ್ಟದ ಪ್ರಶಸ್ತಿ
ಕರುನಾಡ ಬೆಳಗು ಸುದ್ದಿ
ಸಿರುಗುಪ್ಪ,27- ಬಳ್ಳಾರಿ ಜಿಲ್ಲೆಯಲ್ಲಿ ಸಂವಿಧಾನ ಜಾಗೃತಿ ಜಾಥಾವನ್ನು ಯಶಸ್ವಿಯಾಗಿ ಸಂಘಟಿಸಿದ್ದಕ್ಕಾಗಿ ಬಳ್ಳಾರಿ ಜಿಲ್ಲಾ ಆಡಳಿತಕ್ಕೆ ರಾಜ್ಯಮಟ್ಟದ ಪ್ರಶಸ್ತಿ ದೊರೆತಿದೆ ಫೆಬ್ರವರಿ 24ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಸಂವಿಧಾನ ಮತ್ತು ರಾಷ್ಟ್ರೀಯ ಏಕತೆ ಸಮಾವೇಶ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಡಾ ಹೆಚ್ ಸಿ ಮಹಾದೇವಪ್ಪ ಅವರು ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ್ ಅವರಿಗೆ ಪ್ರಶಸ್ತಿ ನೀಡಿದರು.
ಪ್ರಶಸ್ತಿಯು ಫಲಕ ಹಾಗೂ ಒಂದು ಲಕ್ಷ ರೂಪಾಯಿ ಚೆಕ್ ಒಳಗೊಂಡಿದೆ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದ ಅನುಷ್ಠಾನ ವಿಭಾಗದಲ್ಲಿ ಈ ಪ್ರಶಸ್ತಿ ಸಿಕ್ಕಿದೆ ಸಿರುಗುಪ್ಪ ತಾಲೂಕಿನ ಸಿರುಗುಪ್ಪ ನಗರ ತೆಕ್ಕಲಕೋಟೆ ಪಟ್ಟಣ ಪಂಚಾಯತ್ 27 ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಹಳ್ಳಿಗಳಿಗೆ ಸಂವಿಧಾನ ಜಾಗೃತಿ ಜಾಥಾ ಸ್ತಬ್ದಚಿತ್ರ ತೆರಳಿತು ಈ ವೇಳೆ ಸಂಪನ್ಮೂಲ ವ್ಯಕ್ತಿಗಳು ಗಣ್ಯರು ಜನ ಪ್ರತಿನಿಧಿಗಳು ಅಧಿಕಾರಿಗಳು ಶಾಸಕರಾದ ಬಿ ಎಂ ನಾಗರಾಜ್ ಅವರು ತಾಲೂಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ಪವನ್ ಕುಮಾರ್ ಎಸ್ ದಂಡಪ್ಪನವರ್ ನಗರಸಭಾ ಪಟ್ಟಣ ಪಂಚಾಯತ್ ಗ್ರಾಮ ಪಂಚಾಯತ್ ಗಳ ಮತ್ತಿತರರು ಸಂವಿಧಾನದ ಕುರಿತು ಉಪನ್ಯಾಸ ಭಾಷಣ ಜನರಲ್ಲಿ ಸಂವಿಧಾನದ ಕುರಿತು ಅರಿವು ಜಾಗೃತಿ ಮೂಡಿಸಿದ್ದರು.
ಸಂವಿಧಾನದ ಜಾಗೃತಿ ಜಾಥಾ ಯಶಸ್ವಿಗೊಳ್ಳಲು ಶ್ರಮಿಸಿದ ಎಲ್ಲಾ ಅಧಿಕಾರಿಗಳಿಗೆ ಸಿಬ್ಬಂದಿ ವರ್ಗದವರಿಗೆ ತಾಲೂಕ ಆಡಳಿತ ಪರವಾಗಿ ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿಯ ಅಧ್ಯಕ್ಷರು ತಾಲೂಕ ಕಾರ್ಯನಿರ್ವಾಹಕ ದಂಡಾಧಿಕಾರಿಗಳಾದ ತಹಸೀಲ್ದಾರ್ ಶಂಶೇ ಆಲಂ ಅವರು ಸಂವಿಧಾನ ಜಾಗೃತಿ ಜಾಥಾ ಯಶಸ್ವಿಗೊಳ್ಳಲು ಶ್ರಮಿಸಿದ ಎಲ್ಲಾ ಅಧಿಕಾರಿಗಳಿಗೆ ಸಿಬ್ಬಂದಿ ವರ್ಗದವರಿಗೆ ಅಭಿನಂದನೆ ಸಲ್ಲಿಸಿದರು ತಾಲೂಕ ಸಮಾಜ ಕಲ್ಯಾಣ ಸಹಾಯಕ ನಿರ್ದೇಶಕಿ ಬಿ ರಾಜೇಶ್ವರಿ ರಾಷ್ಟ್ರೀಯ ಸಾಕ್ಷರತಾ ಸದಸ್ಯರು ಸಮಾಜ ಸುಧಾರಕ ಅಬ್ದುಲ್ ನಬಿ ಮತ್ತಿತರರು ಇದ್ದರು.