
ಕೊಪ್ಪಳ ರೈಲು ನಿಲ್ದಾಣದ ಕಾಮಗಾರಿ ವಿಕ್ಷಣೆ
ಗುಣಮಟ್ಟದ ಕಾಮಗಾರಿ ನಡೆಸಿ ಸಂಸದ ಸಂಗಣ್ಣ ಸೂಚನೆ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, ೨೫- ಗುಣಮಟ್ಟದ ಕಾಮಗಾರಿ ನಡೆಸಬೇಕು ಎಂದು ಸಂಸದ ಸಂಗಣ್ಣ ಕರಡಿ ಅವರು ಸೂಚನೆ ನೀಡಿದರು.
ಅಮೃತ್ ಭಾರತ ರೈಲು ನಿಲ್ದಾಣಗಳ ಅಭಿವೃದ್ಧಿ ಯೋಜನೆ ಅಡಿಯಲ್ಲಿ ಪುನರಾಭಿವೃದ್ಧಿ ಆಗುತ್ತಿರುವ ಕೊಪ್ಪಳ ರೈಲು ನಿಲ್ದಾಣದ ಕಾಮಗಾರಿಯ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಕೊಪ್ಪಳ ರೈಲು ನಿಲ್ದಾಣ ಪುನಾರಂಭ ಕಾಮಗಾರಿಯಲ್ಲಿ ಕಳಪೆ ಸಾಮಾಗ್ರಿ ಬಳಕೆ ಮಾಡಲಾಗುತ್ತಿದೆ ಎಂಬ ದೂರುಗಳು ಬಂದ ಹಿನ್ನೆಲೆ ಸ್ಥಳಕ್ಕೆ ಭೇಟಿ ನೀಡಿದ್ದೇನೆ. ಕಳಪೆ ಸಾಮಾಗ್ರಿಗಳನ್ನು ಉಪಯೋಗಿಸಿದ ಗುತ್ತಿಗೆದಾರನ ಮೇಲೆ ಕಾನೂನು ಕ್ರಮ ಜರುಗಿಸಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.
ಪ್ರತಿವಾರಕ್ಕೊಮ್ಮೆ ಕೊಪ್ಪಳ ರೈಲ್ವೆ ನಿಲ್ದಾಣ ಅಭಿವೃದ್ಧಿ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ಮಾಡಲಾಗುವುದು. ಹಳೆ ನಿಲ್ದಾಣದ ಕಲ್ಲು, ಮಣ್ಣು, ಕಬ್ಬಿಣ ಬಳಕೆ ಮಾಡಿ ಹೊಸ ನಿಲ್ದಾಣ ಕಾಮಗಾರಿ ಗೆ ಬಳಕೆ ಮಾಡುವಂತಿಲ್ಲ.
ಗುಣಮಟ್ಟದ ಸಾಮಾಗ್ರಿಗಳನ್ನು ಬಳಕೆ ಮಾಡಿ ಕಾಮಗಾರಿ ನಡೆಸಬೇಕು. ಗುಣಮಟ್ಟದ ಕಾಮಗಾರಿ ಬಗ್ಗೆ ರಾಜೀ ಮಾಡಿಕೊಳ್ಳುವುದಿಲ್ಲ. ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದರು.ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನವೀನ್ ಗುಳಗಣ್ಣನವರ್ ಸೇರಿ ಅಧಿಕಾರಿಗಳು ಇದ್ದರು.
ಕೊಪ್ಪಳ ರೈಲ್ವೆ ನಿಲ್ದಾಣ ಅಭಿವೃದ್ಧಿ ಕಾಮಗಾರಿ ಗುಣಮಟ್ಟದಿಂದ ನಡೆಸಲಾಗುವುದು.
ಕಳಪೆ ಸಾಮಾಗ್ರಿ ಬಳಕೆ ಮಾಡಿದರೆ ಕ್ರಮಕೈಗೊಳ್ಳಲಾಗುವುದು.
– ಸಂಗಣ್ಣ ಕರಡಿ
ಸಂಸದರು.
ಕೊಪ್ಪಳ