WhatsApp Image 2024-04-16 at 12.20.05 PM

ಸಚಿವ ನಾಗೇಂದ್ರ ನೇತೃತ್ವದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಕರುನಾಡ ಬೆಳಗು ಸುದ್ದಿ

ಬಳ್ಳಾರಿ,ಏ.15: ತಾಲೂಕಿನ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಸಂಗನಕಲ್ಲು ಗ್ರಾಮದಲ್ಲಿ ಬಳ್ಳಾರಿ ಜಿಲ್ಲಾ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಇ.ತುಕಾರಾಮರ ಪರವಾಗಿ ಮತಯಾಚನೆ ಮಾಡಲು ಆಗಮಿಸಿದ ಯುವಜನ ಕ್ರೀಡೆ ಹಾಗೂ ಪರಿಶಿಷ್ಟ ಪಂಗಡಗಳು ಇಲಾಖೆ ಮತ್ತು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ನಾಗೇಂದ್ರ ರವರ ನೇತೃತ್ವದಲ್ಲಿ ಮತ್ತು ನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಲ್ಲಂಪ್ರಶಾಂತ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳನ್ನು ಮೆಚ್ಚಿ ಸಂಗನಕಲ್ಲು ಗ್ರಾಮದಲ್ಲಿ ಕಾರ್ಯಕರ್ತರು ಮುಖಂಡರು ಮತ್ತು ಗ್ರಾಮ ಪಂಚಾಯಿತಿಯ ಮಾಜಿ ಉಪಾಧ್ಯಕ್ಷರು ಬಿಜೆಪಿ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಬಿಜೆಪಿ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಗ್ರಾಮ ಪಂಚಾಯತಿ ಮಾಜಿ ಉಪಾಧ್ಯಕ್ಷರಾದ ಎರ್ರೆಮ್ಮ ಆಂಜನೇಯಲು ಹಾಗೂ ಪಾಮಣ್ಣ ಮತ್ತು ಅವರ ಕುಟುಂಬದವರು, ಅವರ ಬಳಗದವರು ಮೂರನೇ ವಾರ್ಡಿನಿಂದ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರು ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಮಾನಯ್ಯ, ಕರ್ಮ ಕೈಗಾರಿಕಾ ಅಧ್ಯಕ್ಷರಾದ ಮುಂಡರಿಗೆ ನಾಗರಾಜ್, ಬಗರ್ ಹುಕುಮ್ ಅಧ್ಯಕ್ಷರಾದ ತಿಮ್ಮನಗೌಡ, ಗೋವರ್ಧನ ರೆಡ್ಡಿ, ಕಾಂಗ್ರೆಸ್ ಮುಖಂಡರಾದ ಎರಗುಡಿ ಮಲ್ಲಯ್ಯ, ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರಾದ ಸಂಗನಕಲ್ಲು ವಿಜಯಕುಮಾರ್, ಕನ್ನಡಕಲ್ಲು ಜಿಲ್ಲಾ ಪಂಚಾಯತಿ ಭಾಗದ ಉಸ್ತುವಾರಿಗಳು ಕಾಂಗ್ರೆಸ್ ಮುಖಂಡರಾದ ಬಿ.ದುರ್ಗಣ್ಣ, ಪುನೀತ್, ಜೋಗಿಣ ಚಂದ್ರಪ್ಪ, ಕಾಂಗ್ರೆಸ್ ಯುವ ಮುಖಂಡ ವಿಜಯ್ ಕುಮಾರ್ ಮುಂತಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!