2c136fae-be38-4577-97e1-318669006cc9

ಸಮಾಜ ಕಲ್ಯಾಣ ಇಲಾಖೆಯಿಂದ ಪ್ರೋತ್ಸಾಹಧನ : ವಿದ್ಯಾರ್ಥಿಗಳಿಗೆ ಸೂಚನೆ

ಕರುನಾಡ ಬೆಳಗು ಸುದ್ದಿ

ಕೊಪ್ಪಳ16- ಸಮಾಜ ಕಲ್ಯಾಣ ಇಲಾಖೆ/ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಎಸ್.ಎಸ್.ಎಲ್.ಸಿಯಲ್ಲಿ ಪ್ರಥಮ ಪ್ರಯತ್ನದಲ್ಲಿ ಶೇ.60 ರಿಂದ 74.99 ಪಡೆದ ವಿದ್ಯಾರ್ಥಿಗಳಿಗೆ ಪ್ರೊತ್ಸಾಹಧನ ಮಂಜೂರು ಮಾಡಲಾಗುತ್ತಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಎಸ್.ಎಸ್.ಎಲ್.ಸಿಯಲ್ಲಿ ಪ್ರಥಮ ಪ್ರಯತ್ನದಲ್ಲಿ ಶೇ.60 ರಿಂದ 74.99 ಪಡೆದ ವಿದ್ಯಾರ್ಥಿಗಳಿಗೆ ರೂ.7000/- ಮತ್ತು ಶೇ.75 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ರೂ.15000/- ಗಳ ಪ್ರೋತ್ಸಾಹ ಧನವನ್ನು ಕೇಂದ್ರ ಕಛೇರಿಯಿಂದ ಮಂಜೂರಿಸಲಾಗುತ್ತಿದೆ.

2023-24ನೇ ಸಾಲಿನ ಅಂದರೆ 2023ರಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಮಾಡಿಸಿ, ಹತ್ತಿರದ ತಾಲೂಕಾ ಸಮಾಜ ಕಲ್ಯಾಣ ಇಲಾಖೆ/ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಕಛೇರಿಗೆ ಎಸ್.ಎಸ್.ಎಲ್.ಸಿ ಅಂಕಪಟ್ಟಿ ಝರಾಕ್ಸ್ ಮತ್ತು ಆಧಾರ್ ಕಾರ್ಡ್ ಝರಾಕ್ಸ್ ಪ್ರತಿಗಳನ್ನು ತೆಗೆದುಕೊಂಡು ಹೋಗಲು ಸೂಚಿಸಿದೆ.

ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ, ಕೊಪ್ಪಳ ಮತ್ತು ತಾಲ್ಲೂಕಿನ ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ/ಕೊಪ್ಪಳ/ಗಂಗಾವತಿ/ಯಲಬುರ್ಗಾ/ಕುಷ್ಟಗಿ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳು, ಗಂಗಾವತಿ/ಕುಷ್ಟಗಿ ರವರನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!