
ಸರ್ಕಾರದ ಯೋಜನೆ ಸದ್ಬಳಕೆಪಡಿಸಿಕೊಳ್ಳಿ : ಶಾಸಕ ಹಿಟ್ನಾಳ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 12- ಮಹಿಳೆಯರ ಸಬಲೀಕರಣಕ್ಕೆ ರಾಜ್ಯ ಸರ್ಕಾರ ನಾನಾ ಯೋಜನೆಗಳನ್ನು ಜಾರಿಗೊಳಿಸಿದ್ದು, ಅವುಗಳನ್ನು ಸಮರ್ಪಕವಾಗಿ ಸದ್ಬಳಕೆಪಡಿಸಿಕೊಂಡು ಆರ್ಥಿಕವಾಗಿ ಸಬಲರಾಗಿ ಎಂದು ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಹೇಳಿದರು.
ನಗರದ ವಾಲ್ಮೀಕಿ ಭವನದಲ್ಲಿ ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ವತಿಯಿಂದ ಶುಕ್ರವಾರ ಹಮ್ಮಿಕೊಂಡ ಸನ್ಮಾನ ಮತ್ತು ಉಚಿತ ಹೊಲಿಗೆ ಯಂತ್ರ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮಹಿಳೆಯರಿಗೆ ಹಲವು ಜನಪರ ಯೋಜನೆ ಜಾರಿಗೊಳಿಸಿ, ಅವರಿಗೆ ಶಕ್ತಿ ತುಂಬುವ ಕೆಲಸ ಮಾಡಿದೆ. ಮಹಿಳೆಯರು ಸ್ವಾವಲಂಬಿಗಳಾಗಿ ಜೀವನ ಸಾಗಿಸಲು ಅನುಕೂಲವಾಗಲೆಂದು ವಿಶ್ವಕರ್ಮ ಯೋಜನೆಯಡಿ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ನೀಡಿದ್ದು, ಯೋಜನೆ ಸದುಪಯೋಗ ಪಡಿಸಿಕೊಂಡು ಕುಟುಂಬದ ಆಧಾರಸ್ತಂಬಗಳಾಗಿ ಎಂದು ಮಹಿಳೆಯರಿಗೆ ಕಿವಿಮಾತು ಹೇಳಿದರು.
ಮಹಿಳೆಯರಿಗೆ ಈ-ಶ್ರಮ ಕಾರ್ಡ್ ಮತ್ತು ಕೆಎಸ್ ಟಿಎ ಕಾರ್ಡ್ ಗಳನ್ನು ವಿತರಿಸಿದರು.
ಈ ವೇಳೆ ಸಂಘದ ಅಧ್ಯಕ್ಷ ರಮೇಶ ಅವಾಜಿ, ಮಾಲಾಕ ಅಂಚಿ, ರವಿ ಕುರಗೋಡ, ಶರಣಪ್ಪ ಸಜ್ಜನ್, ಧರ್ಮರಾವ್ ಕಂಪಸಾಗರ ಸೇರಿದಂತೆ ಇತರರಿದ್ದರು.
ಫೋಟೋ ಕ್ಯಾಪ್ಸನ್: ಕೊಪ್ಪಳ ನಗರದ ವಾಲ್ಮೀಕಿ ಭವನದಲ್ಲಿ ಶುಕ್ರವಾರ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಿಸಿದರು.