WhatsApp Image 2024-02-08 at 5.24.15 PM

 ಮುಂಬರುವ ಆಯವ್ಯಯದಲ್ಲಿ ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ವಿಶೇಷ ಅನುದಾನಗಳನ್ನು ಒದಗಿಸುವ ಬಗ್ಗೆ ಮನವಿ

ಕರುನಾಡ ಬೆಳಗು ಸುದ್ದಿ

ಬಳ್ಳಾರಿ,8- ದಿನದಿಂದ ದಿನಕ್ಕೆ ಸರ್ಕಾರಿ ಶಾಲೆಗಳು ಕನಿಷ್ಠ ಮೂಲಸೌಕರ್ಯ ಹಾಗು ಖಾಯಂ ಶಿಕ್ಷಕರ ಕೊರತೆಯಿಂದ ಗುಣಾತ್ಮಕ ಶಿಕ್ಷಣವನ್ನು ಒದಗಿಸಲು ಹಲವು ಸಂಕಷ್ಟಗಳನ್ನು ಎದುರಿಸುತ್ತಿರುವ ಈ ಸಂದರ್ಭದಲ್ಲಿ, ತಾವು ಆಯವ್ಯಯವನ್ನು ಮಂಡಿಸಲು ಸಿದ್ಧತೆಯನ್ನು ನಡೆಸಿದ್ದೀರಿ.

ಜೊತೆಗೆ, ಸಾಮಾಜಿಕ ನ್ಯಾಯವನ್ನು ಕೇಂದ್ರ ಬಿಂದುವನ್ನಾಗಿಸಿಕೊಂಡು ಒಕ್ಕೂಟ ವ್ಯವಸ್ಥೆಯಲ್ಲಿ ತಾವು ಪ್ರತಿಪಾದಿಸುತ್ತಿರುವ ʼಕರ್ನಾಟಕ ಅಭಿವೃದ್ಧಿ ಮಾದರಿಯುʼ, ಸೇವಾ ವಲಯವಾದ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿದಾಗ ಮಾತ್ರ ಈ ಬಗೆಯ ಹೊಸ ಮಾದರಿಗಳು ಜನ ಸಾಮಾನ್ಯರಿಗೆ ಸಂಜೀವಿನಿಯಾಗಿ ಕೆಲಸ ಮಾಡುತ್ತವೆ.

ತಮಗೆ ತಿಳಿದಿರುವಂತೆ ಸರ್ಕಾರಿ ಶಾಲೆಗಳನ್ನು ಸಬಲೀಕರಣಗೊಳಿಸುವ ಮೂಲಕ ಪ್ರತಿಯೊಂದು ಶಾಲೆಯನ್ನು ನೆರೆಹೊರೆಯ ಸಮಾನ ಶಾಲೆಯನ್ನಾಗಿ ಪರಿವರ್ತಿಸಿ ಎಲ್ಲಾ ಮಕ್ಕಳಿಗೆ ಸಮಾನ ಗುಣಮಟ್ಟದ ಶಿಕ್ಷಣ ಒದಗಿಸಬೇಕೆಂಬ ಕೂಗು ರಾಜ್ಯದಲ್ಲಿ ಹಲವು ದಶಕಗಳಿಂದ ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ, ಶಾಲಾ ಶಿಕ್ಷಣ ವಲಯವನ್ನು ಆದ್ಯತಾ ವಲಯವನ್ನಾಗಿ ಪರಿಗಣಿಸಿ, ತಾವು ಮಂಡಿಸಲಿರುವ ಆಯವ್ಯದಲ್ಲಿ ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಅನುದಾನಗಳನ್ನು ಬಿಡುಗಡೆ ಮಾಡಬೇಕೆಂದು ನಾನು ತಮ್ಮಲ್ಲಿ ಕಳಕಳಿಯಿಂದ ಆಗ್ರಹಿಸುತ್ತೇನೆ .

ಈ ಅಂಶಗಳ ಹಿನ್ನೆಲೆಯಲ್ಲಿ , ತಾವು ಮಂಡಿಸಲಿರುವ ಮುಂದಿನ ಆಯವ್ಯಯದಲ್ಲಿ ಶಾಲಾ ಶಿಕ್ಷಣದ ಈ ಕೆಳಕಂಡ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನವನ್ನು ಮೀಸಲಿಡಬೇಕೆಂದು ತಮ್ಮಲ್ಲಿ ವಿನಂತಿಸುತ್ತೇನೆ.

1. ತಾವು ಈ ಹಿಂದೆ ಮೊದಲ ಬಾರಿ ಮುಖ್ಯ ಮಂತ್ರಿಯಾಗಿದ್ದಾಗ , ಸರ್ಕಾರಿ ಶಾಲೆಗಳ ಸಬಲೀಕರಣಗೊಳಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರವು ವಿಸ್ತೃತ ಸಂಶೋಧನೆಯ ಮೂಲಕ ’ಸರ್ಕಾರಿ ಶಾಲೆಗಳ ಸಬಲೀಕರಣ ವರದಿಯನ್ನು ‘ 2017 ರಲ್ಲಿ ಸಲ್ಲಿಸಿತ್ತು . ಆದರೆ, ಇಲ್ಲಿಯವರೆಗೆ ಈ ವರದಿಯನ್ನು ಜಾರಿಗೊಳಿಸಲು ಸರ್ಕಾರ ಯಾವುದೇ ಕ್ರಮ ಕೈಗೊಳ್ಳದಿರುವುದು ದುರದೃಷ್ಟಕರ. ಮುಂದಿನ ಬಜೆಟ್‌ ಅಧಿವೇಶನದಲ್ಲಿ ಈ ವರದಿಯನ್ನು ಸದನದಲ್ಲಿ ಅಂಗೀಕರಿಸಿ ಪೂರ್ಣವಾಗಿ ಜಾರಿಗೊಳಿಸಲು ಆಯವ್ಯಯದಲ್ಲಿ ಹಣ ಮೀಸಲಿಡಬೇಕೆಂದು ಒತ್ತಾಯಿಸುತ್ತೇನೆ.

2. ಶಿಕ್ಷಣ ಮೂಲಭೂತ ಹಕ್ಕಾಗಿ ಸಂವಿಧಾನದಲ್ಲಿ ಸೇರಿ 24 ವರ್ಷಗಳು ಮತ್ತು ಈ ಮೂಲಭೂತ ಹಕ್ಕನ್ನು ಸಾಕಾರಗೊಳಿಸಲು ಈ ಹಿಂದೆ ಇದ್ದ ತಮ್ಮದೇ ಯುಪಿಎ ಸರ್ಕಾರವು ರೂಪಿಸಿ ಜಾರಿಗೊಳಿಸಿದ ಶಿಕ್ಷಣ ಹಕ್ಕು ಕಾಯಿದೆ 2009 ಜಾರಿಗೆ ಬಂದು ಸುಮಾರು 15 ವರ್ಷಗಳು ಕಳೆಯುತ್ತಾ ಬಂದರು, ನಾವು ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಹಕ್ಕು ಕಾಯಿದೆ ಅನ್ವಯ ಮೂಲಭೂತ ಸೌಕರ್ಯಗಳಾದ ಶಿಕ್ಷಕರು, ಕಲಿಕಾ ಕೊಠಡಿ, ಅಗತ್ಯ ಪಾಠೋಪಕರಣ, ಪೀಠೋಪಕರಣ ,ಕ್ರೀಡಾ ಸಾಮಗ್ರಿ ಕುಡಿಯುವ ನೀರು, ಶೌಚಾಲಯ, ಇತ್ಯಾದಿಗಳನ್ನು ಸಮರ್ಪಕವಾಗಿ ಒದಗಿಸಲು ಸಾಧ್ಯವಾಗಿಲ್ಲ. ಕರ್ನಾಟಕದಲ್ಲಿ ಆರ್‌ ಟಿ ಇ ಅನುಪಾಲನೆ ಕೇವಲ ಶೇಕದ.26.3.

ಈ ಕಾರಣದಿಂದ , ಶಿಕ್ಷಣ ಹಕ್ಕು ಕಾಯಿದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಆಯವ್ಯದಲ್ಲಿ ʼವಿಶೇಷ ಮೂಲಭೂತ ಸೌಕರ್ಯ ಅಭಿವೃದ್ಧಿ ಅನುದಾನʼ ವನ್ನು ಬಿಡುಗಡೆ ಮಾಡಬೇಕೆಂದು ನಾನು ತಮ್ಮಲ್ಲಿ ಕಳಕಳಿಯಿಂದ ಆಗ್ರಹಿಸುತ್ತೇನೆ.

3. ಶಿಕ್ಷಣ ಹಕ್ಕು ಕಾಯಿದೆಯನ್ನು ಜಾರಿಗೊಳಿಸಲು ಒಂದು ರೋಡ್‌ ಮ್ಯಾಪನ್ನು ರೂಪಿಸಲು ಬಜೆಟ್‌ ನಲ್ಲಿ ಘೋಷಿಸಬೇಕೆಂದು ನಾನು ತಮ್ಮಲ್ಲಿ ಕಳಕಳಿಯಿಂದ ಆಗ್ರಹಿಸುತ್ತೇನೆ.

4. ಕರ್ನಾಟಕ ಮಾದರಿಯ ಭಾಗವಾಗಿ ಮತ್ತು ಸಾಮಾಜಿಕ ನ್ಯಾಯದ ಆಶಯವನ್ನು ವಿಸ್ತರಿಸಲು ʼಉಚಿತ ಮತ್ತು ಕಡ್ಡಾಯ ಶಿಕ್ಷಣವನ್ನು ಪೂರ್ವ ಪ್ರಾಥಮಿಕದಿಂದ 12ನೇ ತರಗತಿಯವರೆಗೆ ವಿಸ್ತರಿಸಬೇಕು. ರಾಜ್ಯದಲ್ಲಿ ಬಾಲ ಕಾರ್ಮಿಕ ಪದ್ಧತಿಯನ್ನು ೧೮ ವರ್ಷದವರೆಗೆ ನಿಷೇಧಿಸಲು ಮತ್ತು ಸಂವಿಧಾನದ ವಿಧಿ ೪೫ ರ ಆಶಯದಂತೆ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ಒದಗಿಸಲು ಅಗತ್ಯ ಸೌಕರ್ಯಕ್ಕೆ ಮತ್ತು ನರ್ಸರಿ ಶಿಕ್ಷಕರ ತರಬೇತಿಗೆ / ನೇಮಕಾತಿಗೆ ವಿಶೇಷ ಅನುದಾನ ಒದಗಿಸಬೇಕೆಂದು ವಿನಂತಿ

5. ಕಳೆದ ಮೂರು ಶೈಕ್ಷಣಿಕ ವರ್ಷದಿಂದ ಮಕ್ಕಳಿಗೆ ಉಚಿತ ಬೈಸಿಕಲ್ ವಿತರಸಿದ ಕಾರಣ ನೂರಾರು ಮಕ್ಕಳು ಶಿಕ್ಷಣದ ಹಕ್ಕಿನಿಂದ ವಂಚಿತರಾಗಿದ್ದು ಈ ಶೈಕ್ಷಣಿಕ ವರ್ಷದಲ್ಲಿ ಉಚಿತ ಬೈಸಿಕಲ್ ವಿತರಣೆಗೆ ಆಯವ್ಯದಲ್ಲಿ ಅಗತ್ಯ ಅನುದಾನ ನೀಡಬೇಕಾಗಿ ವಿನಂತಿ.

ಬಡವರ ಹಾಗು ದಮನಿತರ ಪರವಾಗಿ ಕೆಲಸ ನಿರ್ವಹಿಸುವ ಭರವಷೆಯನ್ನು ಹೊಂದಿರುವ ತಾವು ಬಡ ಜನರ ಮೂಲ ಆಶಯವಾಗಿರುವ ಗುಣಾತ್ಮಕ ಶಿಕ್ಷಣವನ್ನು ಒದಗಿಸುವ ಭಾಗವಾಗಿ ಮುಂಬರುವ ಆಯವ್ಯಯದಲ್ಲಿ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಆದ್ಯತಾ ವಲಯವನ್ನಾಗಿ ಪರಿಗಣಿಸಿ ಅದನ್ನು ಗಟ್ಟಿಗೊಳಿಸಲು ಮೇಲಿನ ಅಗತ್ಯ ಅನುದಾನಗಳನ್ನು ಒದಗಿಸಬೇಕೆಂದು ತಮ್ಮಲ್ಲಿ ಕಳಕಳಿಯಿಂದ ಕೇಳಿಕೊಳ್ಳುತ್ತೇನೆ. ಬಳ್ಳಾರಿಯ ಜಿಲ್ಲಾಧಿಕಾರಿಗಳ ಕಛೇರಿಯ ವಿಶೇಷ ತಹಶೀಲ್ದಾರ್ ಪ್ರಭಾಕರ್ ಭಟ್ ಇವರ ಮುಖಾಂತರ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿಯನ್ನು ಸಲ್ಲಿಸಲಾಯಿತು.

Leave a Reply

Your email address will not be published. Required fields are marked *

error: Content is protected !!