
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 84.04 ಲಕ್ಷ ರೂ ವೆಚ್ಚದ 8 ನೂತನ ಶಾಲಾ ಕೊಠಡಿಗಳ ಉದ್ಘಾಟನೆ ಶಾಸಕ ಬಿ ಎಂ ನಾಗರಾಜ
ಕರುನಾಡ ಬೆಳಗು ಸುದ್ದಿ
ಸಿರುಗುಪ್ಪ,31- ಪ್ರತಿಯೊಬ್ಬರು ವಿದ್ಯಾವಂತರಾಗಬೇಕು ಎಂದು ಜನಪರ ಜನಪ್ರಿಯ ಶಾಸಕ ಬಿಎಮ್ ನಾಗರಾಜ ಅವರು ಹೇಳಿದರು ಸಿರುಗುಪ್ಪ ತಾಲೂಕಿನ ಬಲಕುಂದಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಕರ್ನಾಟಕ ಸರ್ಕಾರ ಜಿಲ್ಲಾ ಪಂಚಾಯತ್ ಬಳ್ಳಾರಿ ಕೆಕೆಆರ್ ಡಿಬಿ ಯೋಜನೆಯಡಿಯಲ್ಲಿ ನಿರ್ಮಿಸಿದ 84. 04 ಲಕ್ಷ ರೂ ವೆಚ್ಚದ 8 ನೂತನ ಶಾಲಾ ಕೋಠಡಿಗಳನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಎಲ್ಲಾ ಸದಸ್ಯರು ಸಿರುಗುಪ್ಪ ನಗರಸಭಾ ಸದಸ್ಯರಾದ ಬಿ ಎಂ ಅಪ್ಪಾಜಿ ನಾಯಕ್ ವಿ ಪರಶು ರಾಮ ರೇಣುಕರಾಜ್ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣ ಅಭಿಯಂತರದ ತಿಪ್ಪೇಸ್ವಾಮಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್ ಗುರಪ್ಪ ಜಿಲ್ಲಾ ಪಂಚಾಯತ್ ಇಂಜಿನಿಯರ್ ಶ್ರೀನಿವಾಸ್ ರಾಷ್ಟ್ರೀಯ ಸಾಕ್ಷರತಾ ಸಾಮಾಜಿಕ ಕಾರ್ಯಕರ್ತ ಅಬ್ದುಲ್ ನಬಿ ಬಲಕುಂದಿ ಗ್ರಾಮದ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಅಭಿಮಾನಿಗಳು ಮತ್ತು ಗುತ್ತಿಗೆದಾರರು ಇದ್ದರು.