
ಸಾಂಸ್ಕೃತಿಕ ಸೌರಭ ಕಾರ್ಯಕ್ರಮ ಯಶಸ್ವಿ
ಕರುನಾಡ ಬೆಳಗು ಸುದ್ದಿ
ಕೊಪ್ಪಳ,30- ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 2023-24ನೇ ಸಾಲಿನ ಸಾಂಸ್ಕೃತಿಕ ಸೌರಭ ಕಾರ್ಯಕ್ರಮವನ್ನು ನಗರದ ಸಾಹಿತ್ಯ ಭವನದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಕೊಪ್ಪಳ ತಾಲ್ಲೂಕು ಅಧ್ಯಕ್ಷರಾದ ರಾಮಚಂದ್ರೌಡ ಬಿ. ಗೊಂಡಬಾಳ ಅವರು ಉದ್ಘಾಟಿಸಿದರು.
ಈ ಸಂದರ್ಭ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಸಿದ್ದಲಿಂಗಯ್ಯ ಹಿರೇಮಠ, ಶರಣಪ್ಪ ವಡಗೇರಿ, ಕೇಶಪ್ಪ ಶಿಳ್ಳಿಕ್ಯಾತರ, ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಶಿವರಾಜ ಶಾಸ್ತಿç, ವಾಲ್ಮೀಕಪ್ಪ ಯಕ್ಕರನಾಳ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೊಟ್ರೇಶ್ ಮರಬನಳ್ಳಿ ಉಪಸ್ಥಿತರಿದ್ದರು.
ವೇದಿಕೆಯಲ್ಲಿ ಶಾಸ್ತ್ರಿಯ ಸಂಗೀತ, ಸುಗಮ ಸಂಗೀತ, ಗೊಂದಲಿಗರ ಪದಗಳು, ಸಮೂಹ ನೃತ್ಯ, ಜಾನಪದ ಸಂಗೀತ, ಕಥಾ ಕೀರ್ತನ, ಜಾನಪದ ಸಂಗೀತ, ತೊಗಲುಗೊಂಬೆ ಪ್ರದರ್ಶನ, ಕರಡಿ ಮಜಲು ಹಾಗೂ ಡೊಳ್ಳುಕುಣಿತ ಕಲಾಪ್ರಕಾರಗಳನ್ನು ಕಲಾವಿದರು ಪ್ರಸ್ತುತ ಪಡಿಸಿದರು.