
ಸಾಮಾಜಿಕ ಹೋರಾಟಗಾರ ಲಕ್ಕಿಮರದ ಕೃಷ್ಣ ನಿಧನ
ಕರುನಾಡ ಬೆಳಗು ಸುದ್ದಿ
ಮರಿಯಮ್ಮನಹಳ್ಳಿ,1- ಪಟ್ಟಣದ 15ನೇ ವಾರ್ಡಿನ ನಿವಾಸಿಯಾದ ಎಲ್.ಕೃಷ್ಣ (45)ಇವರು ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಅಧ್ಯಕ್ಷರಾಗಿ ಕೆಲಸ ನಿರ್ವಹಿಸಿದ್ದರು,ಪ್ರಸ್ತುತ ಸಹಕಾರ ಸಂಘದಲ್ಲಿ ಸದಸ್ಯರಾಗಿದ್ದರು. ಅಲ್ಲದೇ ಸಾಮಾಜಿಕ ಹೋರಾಟಗಾರರಾಗಿ ಸೇವೆ ಸಲ್ಲಿಸಿದ್ದರು.
ಇವರು ಕೆಲ ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿಯ ಒಪಿಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಬೆಳೆಗಿನ 8:30ರ ಸುಮಾರಿಗೆ ವಿಧಿವಶರಾಗಿದ್ದಾರೆಂದು ಕುಟುಂಬಸ್ಥರಿಂದ ತಿಳಿದು ಬಂದಿದೆ.
ಇವರಿಗೆ ಹೆಂಡತಿ, ಮೂರು ಹೆಣ್ಣು ಮಕ್ಕಳು, ಒಬ್ಬ ಗಂಡು ಮಗನಿದ್ದು, ಕುಟುಂಬದ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಈ ಸಂಧರ್ಭದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟುವಂತಿತ್ತು. ಮಾರ್ಚ್ 2ರಂದು ಪಟ್ಟಣದ ಸಾರ್ವಜನಿಕ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.