
ಜಿಪಂ ಸಿಇಓ ರಾಹುಲ್ ರತ್ನ್ಂ ಪಾಂಡೆಯರಿಂದ
ವಸತಿ ನಿಲಯಗಳ ಪ್ರಗತಿ ಪರಿಶೀಲನೆ
ಕೊಪ್ಪಳ, ೨೧- ವಸತಿ ನಿಲಯದಲ್ಲಿನ ವಿದ್ಯಾರ್ಥಿಗಳಿಗೆ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಲು ಒತ್ತು ಕೊಡಬೇಕು ಎಂದು ಜಿಪಂ ಸಿಇಓ ರಾಹುಲ್ ಪಾಂಡೆಯ ಅವರು ಹೇಳಿದರು.
ಜಿಲ್ಲಾ ಪಂಚಾಯತಿಯ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ಡಿಸೆಂಬರ್ 21ರಂದು ಸಾರ್ವಜನಿಕ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಹಿಂದುಗಳಿದ ವರ್ಗಗಳ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.
ವಿವಿಧ ಇಲಾಖೆಗಳ
ವ್ಯಾಪ್ತಿಯಲ್ಲಿ ಬರುವ ವಸತಿ ನಿಲಯಗಳಲ್ಲಿ ಬಳಸುವ ಪರಿಕರಗಳಾದ ಕಾಟೇಜ್ ಬೆಡ್, ಪಿಲ್ಲೋಜ್, ಕಿಟ್ ಗಳ ಸರಬರಾಜು ಹಾಗೂ ಆಟದ ಸಾಮಗ್ರಿಗಳು, ಪ್ರಯೋಗಾಲಯ, ಲೈಬ್ರರಿ, ಲೈಟ್ಸ್ ಹಾಗೂ ಇನ್ನಿತರ ಸೌಲಭ್ಯಗಳನ್ನು ವಸತಿ ನಿಲಯ ಹಾಗೂ ಶಾಲೆಗಳಿಗೆ ಸೂಕ್ತವಾಗಿ ಅಳವಡಿಸಬೇಕು ಎಂದು ಸೂಚನೆ ನೀಡಿದರು.
ಸಭೆಯಲ್ಲಿ ಡಿಡಿಪಿಐ ಶ್ರೀಶೈಲ ಬಿರಾದಾರ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ರಾಜು ತಳವಾರ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ವಿಜಯಕುಮಾರ, ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಸುರೇಶ ಕೋಕರೆ ಸೇರಿದಂತೆ ಇತರರು ಇದ್ದರು.