2c136fae-be38-4577-97e1-318669006cc9

ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ

ಸಿಇಟಿ, ನೀಟ್ ವಿದ್ಯಾರ್ಥಿಗಳಿಗೆ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಕರುನಾಡ ಬೆಳಗು ಸುದ್ದಿ

ಬಳ್ಳಾರಿ,  24- ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ವತಿಯಿಂದ ಪ್ರಸ್ತಕ ಸಾಲಿಗೆ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಿಇಟಿ, ನೀಟ್ ಮುಖಾಂತರ ವೃತ್ತಿಪರ ಕೋರ್ಸ್‍ಗಳಿಗೆ ಪ್ರವೇಶ ಪಡೆಯಬಯಸುವ ವಿದ್ಯಾರ್ಥಿಗಳಿಗೆ ಸಾಲ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್ಸ್, ಬೌದ್ಧರು, ಸಿಖ್ಖರು, ಪಾರ್ಸಿ ಮತ್ತು ಆಂಗ್ಲೋ ಇಂಡಿಯನ್ ಸಮುದಾಯದ ವಿದ್ಯಾರ್ಥಿಗಳಿಂದ ಸಿಇಟಿ, ನೀಟ್ ಮುಖಾಂತರ ಎಂಬಿಬಿಎಸ್, ಬಿಡಿಎಸ್, ಬಿ.ಆಯುಷ್, ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್, ಬಿಇ, ಬ್ಯಾಚುಲರ್ ಆಫ್ ಟೆಕ್ನಾಲಜಿ ಕೋರ್ಸ್ ಫಾರ್ಮಸಿ, ಅಗ್ರಿಕಲ್ಚರಲ್ ಸೈನ್ಸ್, ವೆಟೆರಿನರಿ, ಫಾರ್ಮ್ ಸೈನ್ಸ್ ಕೋರ್ಸ್‍ಗಳಿಗೆ ಪ್ರವೇಶ ಹೊಂದುವ ವಿದ್ಯಾರ್ಥಿಗಳಿಗೆ ನಿಗಮದಿಂದ ಒದಗಿಸುವ ಅರಿವು ಯೋಜನೆಯಡಿ ಸಾಲ ಸೌಲಭ್ಯ ನೀಡಲಾಗುವುದು.

ಅರ್ಜಿ ಸಲ್ಲಿಸುವವರು ನಿಗಮದ ವೆಬ್‍ಸೈಟ್ https://kmdconline.karnataka.gov.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದ್ದು, ಭರ್ತಿ ಮಾಡಿ ಅದರ ಪ್ರಿಂಟ್‍ಕಾಪಿಯನ್ನು ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಸಲ್ಲಿಸಬೇಕು.

ಬೇಕಾದ ದಾಖಲೆಗಳು: ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ಪಿಯುಸಿ ಅಂಕಪಟ್ಟಿ, ಆಧಾರ್‍ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ರೇಷನ್‍ಕಾರ್ಡ್, ಅಭ್ಯರ್ಥಿ ಮತ್ತು ತಂದೆ, ತಾಯಿಯ 5 ಭಾವಚಿತ್ರಗಳು, ಸಿಇಟಿ, ನೀಟ್ ಗೆ ಸಂಬಂಧಿಸಿದ ಪ್ರವೇಶ ಪತ್ರ ಹಾಗೂ ಇತರೆ ದಾಖಲೆಗಳು ಮತ್ತು ನೋಟರಿ (ಬಾಂಡ್ ಪೇಪರ್) ಈ ಎಲ್ಲಾ ದಾಖಲೆಗಳನ್ನು ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಕಂಟೋನ್‍ಮೆಂಟ್‍ನ ವಿಜಯನಗರ ಕಾಲೋನಿಯ ಹಳೇಮಾರುಕಟ್ಟೆ ರಸ್ತೆ, ನಳಂದ ಕಾಲೇಜ್ ಪಕ್ಕದಲ್ಲಿನ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ, (ನಿ), ಮ ನಂ.47/25 ಅಥವಾ ದೂ.08392-294370 ಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ವಿ.ಮೆಹಬೂಬ್ ಭಾಷಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!