
ಸಿದ್ದಾಪುರ ಗ್ರಾಮದ ನರೇಗಾ ಕೂಲಿಕಾರರಿಗೆ ಮತದಾನ ಜಾಗೃತಿ
ಕರುನಾಡ ಬೆಳಗು ಸುದ್ದಿ
ಕೊಪ್ಪಳ,26- ಕಾರಟಗಿ ತಾಲೂಕಿನ ಸಿದ್ದಾಪುರ ಗ್ರಾಮ ಪಂಚಾಯತ ನರೇಗಾ ಕೂಲಿಕಾರರಿಗೆ ನಾಲಾ ಹೂಳೆತ್ತುವ ಕೆಲಸ ನೀಡಲಾಗಿದ್ದು, ಕಾಮಗಾರಿ ಸ್ಥಳದಲ್ಲಿ ಮತದಾನ ಜಾಗೃತಿ ಹಾಗೂ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಪ್ರಾರಂಭವಾಗಿರುವ “ವಲಸೆ ಯಾಕ್ರಿ , ನಿಮ್ಮೂರಲ್ಲೆ ಉದ್ಯೋಗ ಖಾತ್ರಿ” ಅಭಿಯಾನದ ಕುರಿತು ಮಾಹಿತಿ ನೀಡಲಾಯಿತು.
ಈ ವೇಳೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬರೂ ಕಡ್ಡಾಯವಾಗಿ ನೂರಕ್ಕೆ ನೂರರಷ್ಟು ಮತದಾನ ಮಾಡುವಂತೆ ತಿಳಿಸಿ. ಕೂಲಿಕಾರರಿಗೆ ಮತದಾನ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ನಂತರ ತಾಲೂಕಿನ ಗ್ರಾಮ ಪಂಚಾಯತಗಳಲ್ಲಿ ನರೇಗಾ ಯೋಜನೆಯಡಿ ಈಗಾಗಲೇ ಪ್ರಾರಂಭವಾಗಿರುವ “ವಲಸೆ ಯಾಕ್ರಿ ನಿಮ್ಮೂರಲ್ಲೇ ಉದ್ಯೋಗ ಖಾತ್ರಿ” ಅಭಿಯಾನದಲ್ಲಿ ಕೂಲಿಕಾರರಿಗೆ ಸತತ ಮೂರು ತಿಂಗಳು ಕೆಲಸ ನೀಡಲಾಗುತ್ತಿದ್ದು, ಪ್ರತಿಯೊಬ್ಬರೂ ನಮೂನೆ-6 ನೀಡಿ ಅಭಿಯಾನದ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಲಾಯಿತು.
ಈ ಸಂದರ್ಭಗಳಲ್ಲಿ ತಾಲೂಕು ಐಇಸಿ ಸಂಯೋಜಕರು, ತಾಂತ್ರಿಕ ಸಹಾಯಕರು, ಕಾಯಕ ಬಂಧುಗಳು, ಕೂಲಿಕಾರರು ಇದ್ದರು.