
ಸಿದ್ಧರಾಮಯ್ಯನವರಿಂದ ರಾಜ್ಯದ್ಯಂತ ಪಲ್ಸ್ ಪೋಲಿಯೊ ಅಭಿಯಾನಕ್ಕೆ ಚಾಲನೆ
ಕರುನಾಡ ಬೆಳಗು ಸುದ್ದಿ
ವಿಜಯನಗರ,3- ಜಿಲ್ಲೆಯ ಕಮಲಾಪುರ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ, ರಾಷ್ಟ್ರೀಯ ಪಲ್ಸ್ ಪೋಲಿಯೋ -2024 ಕಾರ್ಯಕ್ರಮದ ಪ್ರಯುಕ್ತ, ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವುದರ ಮೂಲಕ ರಾಜ್ಯ ಮಟ್ಟದ ಪಲ್ಸ್ ಪೋಲಿಯೊ ಅಭಿಯಾನಕ್ಕೆ ಚಾಲನೆ ನೀಡಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಹಂಪಿ ಕನ್ನಡ ವಿಶ್ವ ವಿದ್ಯಾಲಯ ಆರ್ಥಿಕ ಸಮಸ್ಯೆಯಿಂದ ಬಳಲುತ್ತಿದೆ. ಮೂಲ ಭೂತ ಸೌಕರ್ಯಗಳಿಂದ ವಂಚಿತವಾಗಿದೆ, ವಿದ್ಯಾರ್ಥಿಗಳಿಗೆ ಫೇಲೋಶಿಪ್ ಕೊಡುತ್ತಿಲ್ಲ ಎಂಬ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕನ್ನಡ ವಿವಿ ಸ್ಥಿತಿಗೆ ಯಾರು ಕಾರಣ ಯಾರು, ಆ ಸಂಧರ್ಭದಲ್ಲಿ ಯಾರು ಇದ್ದರು. ನೀವೇ ಉತ್ತರ ಹೇಳಿ ಎಂದು ಬಿಜೆಪಿ ಆಡಳಿತ ಇರುವಾಗ ಈ ರೀತಿ ಆಗಿದೆ ಎನ್ನುವ ಅರ್ಥದಲ್ಲಿ ಮಾರ್ಮಿಕವಾಗಿ ನುಡಿದು ಪ್ರಶ್ನೆಗೆ ಉತ್ತರಿಸದೇ ತೆರಳಿದರು.
ಬೆಂಗಳೂರಿನ ರಾಮೇಶ್ವರ ಕೆಫೆಯಲ್ಲಿ ಬಾಂಬ್ ಸ್ಪೋಟ ಪ್ರಕರಣ ಸಂಬಂಧಿಸಿದಂತೆ ಸದ್ಯ ಸಿಸಿಬಿ ಪೊಲೀಸರ ತನಿಖೆಗೆ ವಹಿಸಲಾಗಿದೆ. ಎನ್‌ಐಎ ಗೆ ತನಿಖೆ ಹೊಣೆ ವಹಿಸುವ ಬಗ್ಗೆ ಇನ್ನು ನಿರ್ದಾರ ಮಾಡಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೂ ಯಾರನ್ನು ಬಂಧಿಸಿಲ್ಲ. ಪ್ರಸ್ತುತ ಏನಾಗಿದೆ ಎಂದು ಪೊಲೀಸರಿಂದ ಮಾಹಿತಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.
ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಪ್ರಕರಣ ಇನ್ನು ವಿಚಾರಣೆಯಲ್ಲಿದೆ ಎಫ್‌ಎಸ್ ಎಲ್ ವರದಿ ಸರಕಾರದ ಕೈ ಸೇರಿಲ್ಲ ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.
ಈ ಸಂಧರ್ಭದಲ್ಲಿ ಕ್ರೀಡಾ ಸಚಿವ ಬಿ.ನಾಗೇಂದ್ರ, ಶಾಸಕ ಎಚ್.ಆರ್.ಗವಿಯಪ್ಪ, ಕೆಎಂಎಫ್ ಅಧ್ಯಕ್ಷ ಭಿಮಾನಾಯ್ಕ, ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ, ಜಿ.ಪಂ. ಸಿಇಒ ಬಿ.ಸದಾಶಿವ ಪ್ರಭು, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಶಂಕರ್ ನಾಯ್ಕ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಶ್ವೇತಾ ಇತರರಿದ್ದರು.