ಕೂಸಿನ ಮನೆಯಲ್ಲಿ ಕಾರ್ಯ ನಿರ್ವಹಿಸುವ
ಸಿಬ್ಬಂದಿಗೆ ಪುನರ್ ಮನನ ತರಬೇತಿ
ಕರುನಾಡ ಬೆಳಗು ಸುದ್ದಿ
ಸಿರುಗುಪ್ಪ, ೦೪- ಕೂಲಿನ ಮನೆಯಲ್ಲಿ ಚಿಕ್ಕ ಮಕ್ಕಳಿಗಾಗಿ ಮಕ್ಕಳ ಸ್ನೇಹಿ ಶೌಚಾಲಯ ಮತ್ತು ವಯಸ್ಕರ ಶೌಚಾಲಯ ಪ್ರತ್ಯೇಕವಾಗಿ ಇರುತ್ತವೆ ಮಕ್ಕಳಿಗೆ ಆಟವಾಡಲು ಆಟಿಕೆ ವಸ್ತುಗಳು ವಿಶೇಷ ಚೇತನ ಮಕ್ಕಳಿಗಾಗಿ ಇಳಿಜಾರು ಮತ್ತು ಕೈ ಹಳಿಗಳ ವ್ಯವಸ್ಥೆ ಇದ್ದು ಕೇರ್ ಟೆಕರ್ಸ್ ಗಳು ಮಕ್ಕಳನ್ನು ಉತ್ತಮವಾಗಿ ಲಾಲನೆ ಪಾಲನೆ ಮಾಡಬೇಕು ಎಂದು ತಾಲೂಕ ಪಂಚಾಯತ್ ಸಹಾಯಕ ನಿರ್ದೇಶಕ ಬಸವರಾಜ್ ಅವರು ಹೇಳಿದರು.
ಅವರು ಸಿರುಗುಪ್ಪ ನಗರದ ತಾಲೂಕು ಪಂಚಾಯತ್ ಮಹಾತ್ಮ ಗಾಂಧಿ ಸಭಾಭವನದಲ್ಲಿ ಕೂಸಿನ ಮನೆಯಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿಗೆ ಏರ್ಪಡಿಸಿದ ಪುನರ್ ಮನನ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಹಿಳೆಯರನ್ನು ಉದ್ದೇಶಿಸಿ ಮಾತನಾಡುತ್ತ ಕೂಲಿ ಕಾರ್ಮಿಕರ ಮಕ್ಕಳ ಲಾಲನೆ ಪಾಲನೆಗಾಗಿ ಕರ್ನಾಟಕ ರಾಜ್ಯ ಸರ್ಕಾರ ಕೂಸಿನ ಮನೆ ಯೋಜನೆಯನ್ನು ಆರಂಭಿಸಿದೆ ಸಿರುಗುಪ್ಪ ತಾಲೂಕಿನಲ್ಲಿ ಒಟ್ಟು 25 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಕೂಸಿನ ಮನೆ ಕಾರ್ಯ ಆರಂಭ ಮಾಡಲು ಸಿದ್ಧತೆ ಮಾಡಿಕೊಂಡಿದೆ ಸಿರುಗುಪ್ಪ ತಾಲೂಕಿನಲ್ಲಿ ಕೂಲಿ ಕಾರ್ಮಿಕರ ಕುಟುಂಬಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಆ ಕುಟುಂಬದ ಮೂರು ವರ್ಷದ ಒಳಗಿನ ಮಕ್ಕಳ ರಕ್ಷಣೆಗಾಗಿ ರಾಷ್ಟ್ರೀಯ ಮಹಾತ್ಮ ಗಾಂಧಿ ಉದ್ಯೋಗ ಯೋಜನೆ ಅಡಿಯಲ್ಲಿ ಗ್ರಾಮ ಪಂಚಾಯತ್ ಗಳ ವ್ಯಾಪ್ತಿಯಲ್ಲಿ ಕೂಸಿನ ಮನೆಯನ್ನು ನಿರ್ಮಾಣ ಮಾಡಲಾಗಿದೆ ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಾಲ್ಕು ಜನ ಕೂಸಿನ ಮನೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು ಕೂಸಿನ ಮನೆಯಲ್ಲಿ ಕಾರ್ಯ ನಿರ್ವಹಿಸುವ ಪ್ರತಿಯೊಬ್ಬ ಸಿಬ್ಬಂದಿಯು ಸರ್ಕಾರ ನೀಡುವ ಸಲಹೆ ಸೂಚನೆಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು ಮಕ್ಕಳನ್ನು ಮುತವರ್ಜಿಯಿಂದ ಕಾಳಜಿ ವಹಿಸಿ ನೋಡಿಕೊಳ್ಳಬೇಕು.
ಮಕ್ಕಳ ಪ್ರಾರಂಭಿಕ ಬಾಲ್ಯದ ಬೆಳವಣಿಗೆಗೆ ಪೌಷ್ಟಿಕ ಆಹಾರ ಪ್ರಮುಖ ಪಾತ್ರ ವಹಿಸುತ್ತದೆ ಕೂಸಿನ ಮನೆಯಲ್ಲಿ ಮಕ್ಕಳಿಗೆ ಉತ್ತಮವಾದ ಆಹಾರ ಧಾನ್ಯಗಳಿಂದ ತಯಾರಿಸಿದ ಪೌಷ್ಟಿಕ ಆಹಾರವನ್ನು ಪೂರೈಕೆ ಮಾಡಲಾಗುತ್ತದೆ ಮಕ್ಕಳಿಗೆ ಆಹಾರ ತಯಾರಿಸುವಾಗ ಶುಚಿತ್ವ ಕಾಪಾಡಿಕೊಳ್ಳಬೇಕು ಎಂದು ಅವರು ವಿವರಿಸಿ ಹೇಳಿದರು ನರೇಗಾ ಯೋಜನೆಯ ಮಾಹಿತಿ ಮತ್ತು ಸಂಯೋಜನಾಧಿಕಾರಿ ಸುರೇಶ್ ಅವರು ಮಾತನಾಡಿದರು ರಾಷ್ಟ್ರೀಯ ವಯಸ್ಕರ ಶಿಕ್ಷಣ ಸೆಂಟ್ರಲ್ ಕೌನ್ಸಿಲ್ ಸದಸ್ಯರು ಸಾಕ್ಷರತಾ ಅಬ್ದುಲ್ ನಬಿ ಸಿರುಗುಪ್ಪ ತಾಲೂಕಿನ 25 ಗ್ರಾಮ ಪಂಚಾಯಿತಿಯ ಕೂಸಿನ ಮನೆಯಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ ಅವರು ಭಾಗವಹಿಸಿದ್ದರು.