WhatsApp Image 2024-06-16 at 5.12.40 PM

ಸಿರುಗುಪ್ಪ : ಯು ಜಿ ಹಗರಣ ತನಿಖೆ ಮಾಡಿ

ಕರುನಾಡ ಬೆಳಗು ಸುದ್ದಿ

ಸಿರುಗುಪ್ಪ, 16- ನೀಟ್ ಪರೀಕ್ಷೆ ಫಲಿತಾಂಶದಲ್ಲಿನ ಪಾರದರ್ಶಕತೆ ಕೊರತೆ ಮತ್ತು ಭ್ರಷ್ಟಾಚಾರದ ಆರೋಪಗಳು ಕೇಳಿ ಬಂದಿದ್ದು ಸರಕಾರ ಯಾವುದೇ ಒತ್ತಡಗಳಿಗೆ ಒಳಗಾಗದೆ ಸಮಗ್ರ ತನಿಖೆ ನಡೆಸಬೇಕು ಎಂದು ಎಐಡಿಎಸ್ ಒ ಸಂಘಟನೆ ಜಿಲ್ಲಾ ಉಪಾಧ್ಯಕ್ಷೆ ಎಂ ಶಾಂತಿ ಆಗ್ರಹಿಸಿದರು.

ನಗರದ ತಾಲೂಕು ಕ್ರೀಡಾ ಮೈದಾನದಿಂದ ನೂರಾರು ವಿದ್ಯಾರ್ಥಿಗಳೊಂದಿಗೆ ಮೆರವಣಿಗೆ ನಡೆಸಿ ತಾಲೂಕ ಕಚೇರಿಗೆ ತೆರಳಿ ತಹಸಿಲ್ದಾರ್ ರ ಮೂಲಕ ಪ್ರಧಾನ ಮಂತ್ರಿಗಳಿಗೆ ಮನವಿ ರವಾನಿಸಲಾಯಿತು ನೀಟ್ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮದ ಬಗ್ಗೆ ಸೂಕ್ತ ತನಿಖೆ ನಡೆಸಿ ತಪ್ಪು ಮಾಡಿದವರಿಗೆ ಕಠಿಣ ಶಿಕ್ಷೆ ನೀಡುವಂತೆ ಒತ್ತಾಯಿಸಿದರು.

ಇದರಲ್ಲಿ ಭಾಗಿಯಾದ ಎಲ್ಲಾ ವ್ಯಕ್ತಿಗಳಿಗೂ ಕಠಿಣ ವಿಧಿಸಬೇಕು ಎಂದು ಒತ್ತಾಯಿಸಲಾಯಿತು ಎಐ ಡಿಎಸ್ ಓ ಜಿಲ್ಲಾ ಖಜಾಂಚಿ ಅನುಪಮಾ ಸಂಘಟನೆ ಸದಸ್ಯರಾದ ಕೃಷ್ಣ ಹೊನ್ನೂರು ಸ್ವಾಮಿ ಸೇರಿ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!