
ಸಿರುಗುಪ್ಪ : ಸರ್ಕಾರಿ ಐಟಿಐ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
ಕರುನಾಡ ಬೆಳಗು ಸುದ್ದಿ
ಸಿರುಗುಪ್ಪ, 26- ಸಿರುಗುಪ್ಪದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಪ್ರಸಕ್ತ ಸಾಲಿಗೆ ವಿವಿಧ ವೃತ್ತಿಗಳಾದ ವಿದ್ಯುತ್ ಕರ್ಮಿ ಜೋಡಣೆಗಾರ ಪ್ರವೇಶಕ್ಕಾಗಿ ಮೆರಿಟ್ ಕಮ್ ಲಿಸರ್ವೇಶನ್ ಆಧಾರದ ಮೇಲೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಸಿರುಗುಪ್ಪ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ವಿ ಶೇಷಣ್ಣ ಅವರು ಪ್ರಕಟಿಸಿದ್ದಾರೆ ಎಂದು ರಾಷ್ಟ್ರೀಯ ಸಾಕ್ಷರತಾ ಸದಸ್ಯ ಸಾಮಾಜಿಕ ಕಾರ್ಯಕರ್ತ ಅಬ್ದುಲ್ ನಬಿ ತಿಳಿಸಿದ್ದಾರೆ.
ಎಸ್ ಎಸ್ ಎಲ್ ಸಿ ಉತ್ತೀರ್ಣರಾದ ಅರ್ಹ ಆಸಕ್ತ ಅಭ್ಯರ್ಥಿಗಳು ಸಿರುಗುಪ್ಪದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಜೂನ್ 3ರ ರೊಳಗೆ ಅರ್ಜಿ ಸಲ್ಲಿಸಬಹುದು ಬೇಕಾದ ದಾಖಲೆಗಳು ಆಧಾರ್ ಕಾರ್ಡ್ ಹೈದರಾಬಾದ್ ಕರ್ನಾಟಕ (371 ಜೆ) ಪ್ರಮಾಣ ಪತ್ರ ಎಸ್ ಎಸ್ ಎಲ್ ಸಿ ಅಂಕಪಟ್ಟಿ ವರ್ಗಾವಣೆ ಪ್ರಮಾಣ ಪತ್ರ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಕನ್ನಡ ಹಾಗೂ ಗ್ರಾಮೀಣ ಪ್ರಮಾಣ ಪತ್ರ ಇನ್ನಿತರ ದಾಖಲಾತಿಗಳು ಹೆಚ್ಚಿನ ಮಾಹಿತಿಗೆ ಮೊ.9448441568,9902781032 ಹಾಗೂ 9980862730,9108128468ಗೆ ಸಂಪರ್ಕಿಸಬಹುದು.