2c136fae-be38-4577-97e1-318669006cc9

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ

ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 28- ಕೊಪ್ಪಳ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ/ ಬಾಲಕೀಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2024-25ನೇ ಸಾಲಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜುಲೈ 10 ಕೊನೆಯ ದಿನಾಂಕವಾಗಿದ್ದು, ಪ್ರವರ್ಗ-1, ಎಸ್.ಸಿ. & ಎಸ್.ಟಿ. ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ರೂ. 1ಲಕ್ಷ ಮತ್ತು ಪ್ರವರ್ಗ-2ಎ, 2ಬಿ, 3ಎ, 3ಬಿ ಇತರೆ ಹಿಂದುಳಿದ ವರ್ಗ ಹಾಗೂ ಇತರೆ ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ರೂ. 44,500 ಒಳಗಿರಬೇಕು.

ಅರ್ಜಿಯನ್ನು ಇಲಾಖೆಯ ವೆಬ್‌ಸೈಟ್ https://shp.karnataka.gov.in/bcwd ನಲ್ಲಿ ಸಲ್ಲಿಸಬೇಕು. ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‌ಸೈಟ್ www.bcwd.karnataka.gov.in ನ್ನು ನೋಡಬಹುದು. ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ ಇ-ಮೇಲ್ bcwdhelpline@gmail.com ಮುಖಾಂತರ ಅಥವಾ ಜಿಲ್ಲಾ/ ತಾಲ್ಲೂಕು ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸುವುದು. ಸಹಾಯವಾಣಿ ಸಂಖ್ಯೆ 8050770004 & 8050770005 ಆಗಿರುತ್ತದೆ ಎಂದು ಕೊಪ್ಪಳ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!