2c136fae-be38-4577-97e1-318669006cc9

ಹಿಂದುಳಿದ ವರ್ಗದ ಕಾನೂನು ಪದವೀಧರರ ವೃತ್ತಿ ತರಬೇತಿಗೆ ಅರ್ಜಿ ಆಹ್ವಾನ

ಕರುನಾಡ ಬೆಳಗು ಸುದ್ದಿ

ವಿಜಯನಗರ, 22- 2024-25ನೇ ಸಾಲಿನಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಹಿಂದುಳಿದ ವರ್ಗದ ಕಾನೂನು ಪದವೀಧರರಿಗೆ ಕಾನೂನು ತರಬೇತಿ ಭತ್ಯೆಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ವಿಜಯನಗರ ಜಿಲ್ಲೆಯ ಹಿಂದುಳಿದ ಕಲ್ಯಾಣ ಇಲಾಖೆ ಕಚೇರಿಗೆ ಜುಲೈ 20 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಯು ವಿಜಯನಗರ ಜಿಲ್ಲೆಯವರಾಗಿರಬೇಕು, ಸರ್ಕಾರಿ ಆದೇಶ ಸಂಖ್ಯೆ: ಎಸ್‌ಡಬ್ಲ್ಯೂಡಿ 187 ಪಕವಿ 2010 ಬೆಂಗಳೂರು ದಿನಾಂಕ:25-11-2011 ರನ್ವಯ ಅಭ್ಯರ್ಥಿಗಳು ಪ್ರವರ್ಗ-1, ಪ್ರವರ್ಗ-2(ಎ), ಪ್ರವರ್ಗ-3(ಎ) ಮತ್ತು ಪ್ರವರ್ಗ-3(ಬಿ)ಗೆ ಸೇರಿದವರಾಗಿರಬೇಕು, ಸರ್ಕಾರಿ ಆದೇಶ ಸಂಖ್ಯೆ:ಸಕಇ 446 ಬಿಎಂಎಸ್ 2005 ಬೆಂಗಳೂರು ದಿನಾಂಕ:1-12-2005ರ ಆದೇಶದಲ್ಲಿ ಶೇಕಡವಾರು ಪ್ರವರ್ಗ-1ರಲ್ಲಿ 2 ಅಭ್ಯರ್ಥಿಗಳನ್ನು ಅಯ್ಕೆ ಮಾಡಿ ಉಳಿದ ವರ್ಗಗಳಲ್ಲಿ ನಿಯಮಾನುಸಾರ 8 ಅಭ್ಯರ್ಥಿಗಳು ಒಟ್ಟು 10 ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು, ಅಭ್ಯರ್ಥಿಯು ಬಾರ್ ಕೌನ್ಸಿಲ್‌ನಲ್ಲಿ ಹೆಸರನ್ನು ನೋಂದಾಯಿಸಿರಬೇಕು, ತರಬೇತಿಗೆ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕಕ್ಕೆ ಹಿಂದೆ 2 ವರ್ಷಗಳೊಳಗಾಗಿ ಕಾನೂನು ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು, ಕಾನೂನು ತರಬೇತಿಯು 4 ವರ್ಷಗಳ ಅವಧಿಯಾಗಿದ್ದು, ತಿಂಗಳಿಗೆ 4ಸಾವಿರ ತರಬೇತಿ ಭತ್ಯೆ ನೀಡಲಾಗುವುದು, ಕಾನೂನು ತರಬೇತಿಗೆ ವಿಜಯನಗರ ಜಿಲ್ಲೆಯಿಂದ 10 ಅಭ್ಯರ್ಥಿಗಳನ್ನು ಮಾತ್ರ ಆಯ್ಕೆ ಮಾಡಲಾಗುವುದು, ಪ್ರವರ್ಗ-1 15% 2 ಅಭ್ಯರ್ಥಿಗಳು, ಪ್ರವರ್ಗ-2ಎ 53% 5 ಅಭ್ಯರ್ಥಿಗಳು, ಪ್ರವರ್ಗ-3ಎ 15% 1 ಅಭ್ಯರ್ಥಿ, ಪ್ರವರ್ಗ-3ಬಿ 17% 2 ಅಭ್ಯರ್ಥಿಗಳು ಸೇರಿ ಒಟ್ಟು 100% 10 ಅಭ್ಯರ್ಥಿಗಳನ್ನು ತರಬೇತಿಗೆ ಆಯ್ಕೆ ಮಾಡಲಾಗುವುದು, ಹಿಂದುಳಿದ ವರ್ಗಗಳ ಪ್ರವರ್ಗ-1, ಪ್ರವರ್ಗ-2ಎ, 3ಎ ಹಾಗೂ 3ಬಿ ಅಭ್ಯರ್ಥಿಗಳಿಗೆ 38 ವರ್ಷ ಗರಿಷ್ಠ ವಯೋಮಿತಿ (ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕಕ್ಕೆ) ಇರುತ್ತದೆ, ತರಬೇತಿಯ ಅವಧಿಯ ಮಧ್ಯಭಾಗದಲ್ಲಿ ಅಭ್ಯರ್ಥಿಯು ತರಬೇತಿಗೆ ಗೈರು ಹಾಜರಾದಲ್ಲಿ ಪಡೆಯಲಾಗಿರುವ ತರಬೇತಿ ಭತ್ಯೆಯ ಹಣವನ್ನು ಬಡ್ಡಿಯೊಂದಿಗೆ ಪಾವತಿಸಬೇಕಾಗುವುದು, ವಾರ್ಷಿಕ ಆದಾಯದ ಮಿತಿ ಪ್ರವರ್ಗ-1ರ ಅಭ್ಯರ್ಥಿಗಳಿಗೆ ರೂ.3.50 ಲಕ್ಷ, ಪ್ರವರ್ಗ-2ಎ, 3ಎ ಮತ್ತು 3ಬಿ ರೂ.2.50 ಲಕ್ಷಗಳ ವಾರ್ಷಿಕ ಆದಾಯದ ಮಿತಿಯನ್ನು ನಿಗದಿಪಡಿಸಲಾಗಿದೆ, ಆಯ್ಕೆಯಾದ ಅಭ್ಯರ್ಥಿಗಳನ್ನು ಜಿಲ್ಲಾ ಸಮಿತಿಯು ಜಿಲ್ಲಾ ಪಬ್ಲಿಕ್ ಪ್ರಾಸಿಕ್ಯೂಟರ್, ಸರ್ಕಾರಿ ವಕೀಲರು ಅಥವಾ ಕನಿಷ್ಟ 15 ವರ್ಷಗಳ ವೃತ್ತಿಯಲ್ಲಿ ಅನುಭವ ಹೊಂದಿರುವ ವಕೀಲರ ಅಧೀನದಲ್ಲಿ ತರಬೇತಿ ಪಡೆಯುವುದು, ಅಭ್ಯರ್ಥಿಗಳನ್ನು ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯಿಂದ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು, ಅಭ್ಯರ್ಥಿಗಳು ಅರ್ಜಿಯ ಜೊತೆಗೆ ಎಸ್.ಎಸ್.ಎಲ್.ಸಿ. ಅಂಕಪಟ್ಟಿ ಅಥವಾ ಶಾಲಾ ವರ್ಗಾವಣೆ ಪ್ರಮಾಣ ಪತ್ರ ಮತ್ತು ಪದವಿ ಹಾಗೂ ಕಾನೂನು ಪದವಿಗಳಲ್ಲಿ ಪಡೆದ ಅಂಕಪಟ್ಟಿ ಪ್ರಮಾಣ ಪತ್ರದ ದೃಢೀಕರಣ ಪ್ರತಿಗಳನ್ನು ಲಗತ್ತಿಸುವುದು.

ಅಪೂರ್ಣವಾದ ಹಾಗೂ ಕೊನೆಯ ದಿನಾಂಕದ ನಂತರ ಬಂದ ಅರ್ಜಿಯನ್ನು ಯಾವುದೇ ಮುನ್ಸೂಚನೆ ಇಲ್ಲದೇ ತಿರಸ್ಕರಿಸಲಾಗುವುದು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ, ಮಾರುತಿ ನಿಲಯ, 35ನೇ ವಾರ್ಡ್, ಪುಣ್ಯಾನಂದಪುರಿ ನಗರ ಆಕಾಶವಾಣಿ ಹತ್ತಿರ, ಹೊಸಪೇಟೆ. ಇಲ್ಲಿಗೆ ಕಚೇರಿ ವೇಳೆಯಲ್ಲಿ ಅರ್ಜಿ ನಮೂನೆಯನ್ನು ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ದೂ.ಸಂ : 08394-796292 ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!