
ಹುತಾತ್ಮರ ಸ್ಮರಣಾರ್ಥ ಜಿಲ್ಲಾಡಳಿತದ ಭವನದಲ್ಲಿ ಮೌನಾಚರಣೆ
ಕರುನಾಡ ಬೆಳಗು ಸುದ್ದಿ
ವಿಜಯನಗರ,30- ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ತ್ಯಾಗ ಬಲಿದಾನಗಳ ಮೂಲಕ ಪ್ರಾಣತೆತ್ತು ಹುತಾತ್ಮರಾದವರ ಸ್ಮರಣಾರ್ಥವಾಗಿ ಜಿಲ್ಲಾಡಳಿತದಿಂದ ಜನವರಿ 30ರಂದು ಮೌನಾಚರಣೆ ಕಾರ್ಯಕ್ರಮ ನಡೆಯಿತು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಸದಾಶಿವ ಪ್ರಭು ಬಿ., ಅಪರ ಜಿಲ್ಲಾಧಿಕಾರಿಗಳಾದ ಅನುರಾಧ ಜಿ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಗಳು ಹಾಜರಿದ್ದು, ಎರಡು ನಿಮಿಷಗಳ ಕಾಲ ಮೌನಾಚರಣೆ ಮಾಡಿ, ಹುತಾತ್ಮರಿಗೆ ಗೌರವ ಸಮರ್ಪಿಸಿದರು.