ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ: ಪೂರ್ವಭಾವಿ ಸಭೆ
ಹೆಚ್ಚಿನ ಸಂಖ್ಯೆಯಲ್ಲಿ ನೌಕರರು ಕ್ರೀಡಾಕೂಟದಲ್ಲಿ ಭಾಗವಹಿಸಿ: ಡಿಸಿ ನಲಿನ್ ಅತುಲ್
ಕರುನಾಡ ಬೆಳಗು ಸುದ್ದಿ
ಕೊಪ್ಪಳ ಫೆಬ್ರವರಿ 19 (ಕರ್ನಾಟಕ ವಾರ್ತೆ): ಮಾರ್ಚ್ 06 ಮತ್ತು 07 ರಂದು ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕುಟವನ್ನು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದು, ಆಸಕ್ತ ನೌಕಕರು ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಕ್ರೀಡಾಕೂಟವನ್ನು ಯಶಸ್ವಿಗೊಳಿಸಿ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಹೇಳಿದರು.
2023-24ನೇ ಸಾಲಿನ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ಜಿಲ್ಲಾ ಮಟ್ಟದಲ್ಲಿ ಸಂಘಟಿಸುವ ಕುರಿತು ಚರ್ಚಿಸಲು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರದಂದು ಹಮ್ಮಿಕೊಳ್ಳಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರಸಕ್ತ ಸಾಲಿನ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ವಾರ್ಷಿಕ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮಾರ್ಚ್ 06 ಮತ್ತು 07 ರಂದು ಹಮ್ಮಿಕೊಳ್ಳಲು ನಿರ್ಧರಿಸಲಾಗಿದ್ದು, ಕ್ರೀಡಾಕೂಟಕ್ಕೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಧಿಕಾರಿಗಳು ಸಕಲ ನೆರವು ಒದಗಿಸಬೇಕು. ಕಾರ್ಯಕ್ರಮ ಅಚ್ಚುಕಟ್ಟಾಗಿ ಆಯೋಜಿಸುವುದಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳಿಗೂ ಸಹ ಜವಾಬ್ದಾರಿಯನ್ನು ನೀಡಲಾಗಿದೆ. ಆಯಾ ಅಧಿಕಾರಿಗಳು ತಮಗೆ ವಹಿಸಿದ ಹೊಣೆಗಾರಿಕೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿ, ಕ್ರೀಡಾಕೂಟವನ್ನು ಯಶಸ್ವಿಗೊಳಿಸಬೇಕು.

ಕ್ರೀಡಾಕೂಟದಲ್ಲಿ ಅಥ್ಲೆಟಿಕ್ಸ್, ಕುಸ್ತಿ, ಪವರ್ಲಿಫ್ಟಿಂಗ್ ಸೇರಿದಂತೆ ಒಳಾಂಗಣ ಕ್ರೀಡೆಗಳಾದ ಕೇರಂ, ಚೆಸ್ ಹಾಗೂ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಜಿಲ್ಲೆಯ ಎಲ್ಲಾ ಸರ್ಕಾರಿ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದರು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷರು ಹಾಗೂ ಕೊಪ್ಪಳ ಜಿಲ್ಲಾ ಘಟಕದ ಅಧ್ಯಕ್ಷರಾದ ನಾಗರಾಜ ಜುಮ್ಮನ್ನವರ್ ಅವರು ಮಾತನಾಡಿ, ಜಿಲ್ಲಾ ಮಟ್ಟದ ಕ್ರೀಡಾಕೂಟವಾಗಿರುವುದರಿಂದ, ಕಾರ್ಯಕ್ರಮವನ್ನು ಯಶಸ್ವಿಯಾಗಿಸಲು ಎಲ್ಲಾ ಅಧಿಕಾರಿ, ಸಿಬ್ಬಂದಿ ಹಾಗೂ ಎಲ್ಲಾ ಸರ್ಕಾರಿ ನೌಕರರ ಸಹಕಾರ ಅಗತ್ಯವಾಗಿದೆ. ಈ ಬಾರಿಯ ಕ್ರೀಡಾಕೂಟದಲ್ಲಿ ವಿಶೇಷ ಚೇತನ ನೌಕಕರಿಗೆ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರಿಗೆ ಪ್ರತ್ಯೇಕವಾಗಿ ಕ್ರೀಡಾಕೂಟ ಏರ್ಪಡಿಸಲಾಗುವುದು. ಕ್ರೀಡಾಕೂಟದಲ್ಲಿ ಭಾಗವಹಿಸುವ ಪ್ರತಿಯೊಬ್ಬ ನೌಕರರು ಕಡ್ಡಾಯವಾಗಿ ಆನ್ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವಿಠ್ಠಲ್ ಜಾಬಗೌಡರ್, ರಾಜ್ಯ ಸರ್ಕಾರಿ ನೌಕರರ ಸಂಘದ ಕೊಪ್ಪಳ ಜಿಲ್ಲಾ ಘಟಕದ ಸದಸ್ಯರು, ಪದಾಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಜಿಲ್ಲಾ ಕ್ರೀಡಾಂಗಣ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಫೆಬ್ರವರಿ 27 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನದ ಅಂಗವಾಗಿ ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಸಮ್ಮೇಳನದ ಪೋಸ್ಟರ್ ಬಿಡುಗಡೆಗೊಳಿಸಿದರು.