
ಹೆಚ್.ಕಾಂತರಾಜು ವರದಿಯನ್ನು ಸ್ವೀಕರಿಸಿ ಚರ್ಚೆಗೆ ಬರಬೇಕು 28ರಂದು ಚಿತ್ರದುರ್ಗದಲ್ಲಿ ಬೃಹತ್ ಸಮಾವೇಶ
ಕರುನಾಡ ಬೆಳಗು ಸುದ್ದಿ
ವಿಜಯನಗರ,17- ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ, ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ (ರಿ) ಇವರು ಸಂಯುಕ್ತ ಆಶ್ರಯದಲ್ಲಿ ಇಂದು ವಿಜಯನಗರ ಜಿಲ್ಲೆ ಹೊಸಪೇಟೆ ನಗರದ ಡಾ.ಬಿ.ಆರ್. ಅಂಬೇಡ್ಕರ್ ಭವನದ ಗೌತಮ್ ಬುದ್ದ ಫಂಕ್ಷನ್ ಹಾಲ್ ನಲ್ಲಿ ಕರ್ನಾಟಕ ಶೋಷಿತರ ಜಾಗೃತಿಗಾಗಿ ರಾಜ್ಯ ಸಮಾವೇಶ , ವಿಜಯನಗರ ಜಿಲ್ಲಾ ಮಟ್ಟದ ಪೂರ್ವಭಾವಿ ಸಭೆ ನಡೆಯಿತು .
ಈ ಸಭೆಯಲ್ಲಿ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಕೆ.ಎಂ.ರಾಮಚಂದ್ರಪ್ಪರವರು ಮಾತನಾಡಿ ಸುಪ್ರೀಂ ಕೋರ್ಟ್ ಹಿಂದುಳಿದ ವರ್ಗಗಳ ಶಾಶ್ವತ ಆಯೋಗವನ್ನು ರಚಿಸಿ ಕೊಳ್ಳುವಂತೆ ರಾಜ್ಯಗಳಿಗೆ ನಿರ್ದೇಶಿಸಲಾಗಿದೆ ಆ ಪ್ರಕಾರ ಎಲ್ಲಾ ರಾಜ್ಯಗಳು ಆಯೋಗ ರಚಿಸಿ ಎಲ್ಲಾ ಜಾತಿಗಳ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಹಿಂದುಳಿದಿರುವ ಗುರುತಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈ ಅಧ್ಯಯನಗಳನ್ನು ಪರಿಶೀಲಿಸಿ ಎಲ್ಲಾ ಸಮಾನ ರಾಜ್ಯ ಸರ್ಕಾರಗಳು ಅವಕಾಶಗಳನ್ನು ಕಲ್ಪಿಸಬೇಕು ಎಂಬುದು ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಒತ್ತಾಯವಾಗಿದೆ. ಹೆಚ್.ಕಾಂತ ವರದಿಯನ್ನು ರಾಜ್ಯ ಸರ್ಕಾರವು ಈ ಕೂಡಲೇ ಸ್ವೀಕರಿಸಿ ಸಾರ್ವಜನಿಕರಿಗೆ ಚರ್ಚೆಗೆ ಬಿಟ್ಟು ವರದಿಯನ್ನು ಅಂಗೀಕರಿಸಿ ಜಾರಿಗೆ ತರಬೇಕು, ಕೇಂದ್ರ ಸರ್ಕಾರವು ಜಾತಿವಾರು ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಮಾಡಿಸಬೇಕು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ಅಲ್ಪಸಂಖ್ಯಾತರ ಜನಸಂಖ್ಯೆಗೆ ಅನುಗುಣವಾಗಿ ಶೇ. , ಈ ಸಮಾವೇಶದಲ್ಲಿ ರಾಜ್ಯದ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಶೋಷಿತ ಸಮುದಾಯಗಳ ಹಲವಾರು ಸಚಿವರು, ಸಂಘಟನೆಗಳು, ಸಮುದಾಯಗಳ ಪ್ರಮುಖರು ಭಾಗವಹಿಸಲು ಆಹ್ವಾನ ನೀಡಿದರು, ರಾಜ್ಯಾದ್ಯಂತ ಪ್ರವಾಸ ಮಾಡಿಭಾವಿ ಸಭೆಗಳನ್ನು ನಡೆಸಲಾಗಿದೆ ಎಂದು ವಿಜಯನಗರ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ದಿನಾಂಕ 28-01-2024 ರಂದು ಚಿತ್ರದುರ್ಗದಲ್ಲಿ ನಡೆಯುತ್ತಿರುವ ಶೋಷಿತ ಸಮುದಾಯಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕರೆ ನೀಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ರಾಜ್ಯಾಧ್ಯಕ್ಷ ಕೆ.ಎಂ.ರಾಮಚಂದ್ರಪ್ಪ, ಕರ್ನಾಟಕ ರಾಜ್ಯ ಕುರುಬರ ಸಂಘದ ಅಧ್ಯಕ್ಷ ಎಂ.ವೀರಣ್ಣ, ಆದರ್ಶ ಯಲ್ಲಪ್ಪ, ಎಣ್ಣೆ ವೆಂಕಟರಾಮಯ್ಯ, ಕೃಷ್ಣ ಮೂರ್ತಿ, ರಾಜ್ಯ ಭಗವಂತ ರಾವ್ ಪಾಟೀಲ್, ಸುಬ್ರಹ್ಮಣ್ಯ, ಕೋಡಿ ಹಳ್ಳಿ ಭೀಮಪ್ಪ, ಕೆ.ಪರಶುರಾಮಪ್ಪ, ಕೆ. ಎಂ.ಹಾಲಪ್ಪ, ಎಲ್.ಸಿದ್ದನಗೌಡ, ರಾಮಚಂದ್ರಗೌಡ, ಬಾಲೆ ಸಾಬ್, ಡಿ.ವೆಂಕಟರಮಣ, ಮಂಜುನಾಥ ಯಾದವ್, ಕೆ ರವಿಕುಮಾರ್, ಬಣ್ಣದಮನೆ ಸೋಮಶೇಖರ್, ಸಣ್ಣ ಮಾರೆಪ್ಪ, ಕುಬೇರ ದಲ್ಲಾಳಿ, ತಾರಾ ಭಾಷ, ನಾಗೇನಹಳ್ಳಿ ಡಿ.ಸಿ ಬಸವರಾಜ, ಮರಿಯಪ್ಪ ಇತರರಿದ್ದರು.