
ಹೊಸಪೇಟೆ : ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಗವಿಯಪ್ಪ ಚಾಲನೆ
ಕರುನಾಡ ಬೆಳಗು ಸುದ್ದಿ
ವಿಜಯನಗರ, 14- ಶಾಸಕ ಹೆಚ್. ಆರ್. ಗವಿಯಪ್ಪ ಹೊಸಪೇಟೆ ತಾಲೂಕಿನ ಗ್ರಾಮೀಣ ಭಾಗದಲ್ಲಿ ಪ್ರವಾಸ ಕೈಗೊಂಡು ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.
ರಾಂಪುರ್ ಮಾಗಾಣಿ, ನರಸಾಪುರ ಮಾಗಾಣಿ, ಜಾಗೀರದಾರ ಬಂಡಿ ಗ್ರಾಮಗಳಿಗೆ ಭೇಟಿ ನೀಡಿ ರೈತರ ಅನುಕೂಲಕ್ಕಾಗಿ ಮುಖ್ಯರಸ್ತೆಯಿಂದ ಹಲವು ಗದ್ದೆಗಳಿಗೆ ಸಂಪರ್ಕ ಕಲ್ಪಿಸುವ ಮಾಗಾಣಿ ರಸ್ತೆಗಳ ಅಭಿವೃದ್ಧಿಗಾಗಿ ಸುಮಾರು 15 ರಸ್ತೆಗಳ ಸ್ಥಳ ವೀಕ್ಷಣೆ ನಡೆಸಿದರು. ಈ ಬಗ್ಗೆ ಪಂಚಾಯತ್ ರಾಜ್ ಎಂಜಿನಿಯರಿAಗ್ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ರಸ್ತೆಗಳ ಅಭಿವೃದ್ಧಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲು ಸೂಚಿಸಿದರು.
ಈ ಭಾಗದಲ್ಲಿ ಹಲವು ಕಡೆ ಸಿಸಿ ರಸ್ತೆ, ಚರಂಡಿ ಮತ್ತು ಶಾಲೆಗಳ ರಿಪೇರಿ ಅಗತ್ಯವಿದೆ ಎಂದು ಇದೆ ವೇಳೆ ಹಲವು ಗ್ರಾಮಗಳ ಸಾರ್ವಜನಿಕರು ಶಾಸಕರಲ್ಲಿ ಮನವಿ ಮಾಡಿದರು.
ಈ ಬಗ್ಗೆ ಪರಿಶೀಲಿಸಿ ಇದಕ್ಕೆ ವಿಶೇಷ ಆದ್ಯತೆ ನೀಡಿ ಸಿಸಿ ರಸ್ತೆ, ಚರಂಡಿ ಮತ್ತು ಶಾಲೆಗಳ ರಿಪೇರಿ ಕಾಮಗಾರಿಗಳಿಗೆ ಲಭ್ಯವಿರುವ ಅನುದಾನದಲ್ಲಿ ಮುಂದಿನ ಕ್ರಮ ವಹಿಸಬೇಕು ಎಂದು ಶಾಸಕರು ಸಂಬAಧಿಸಿದ ಇಲಾಖೆಯ ಅಧಿಕಾರಿಗಳು ನಿರ್ದೇಶನ ನೀಡಿದರು.
ಕೊಳವೆಬಾವಿ ಕೊರೆಯಲು ಪೂಜೆ: ಇಪ್ಪಿತೇರಿ ಗ್ರಾಮಸ್ಥರ ಮನವಿ ಮೇರೆಗೆ ಶಾಸಕರು, ಇಪ್ಪಿತೇರಿ ಗ್ರಾಮದಲ್ಲಿ ಗ್ರಾಮಸ್ಥರಿಗೆ ಕುಡಿಯುವ ನೀರಿಗೆ ಅನುಕೂಲವಾಗಲು ಕುಡಿಯುವ ನೀರಿಗಾಗಿ ಕೊಳವೆ ಬಾವಿ ಕೊರೆಯಲು ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ವಿನಯ್ ಶೆಟ್ಟರ್, ರಘುಕುಮಾರ್, ಅಂಜನಪ್ಪ, ಬಸವರಾಜ್ ನಾಗೇನಹಳ್ಳಿ, ತೋಟಪ್ಪ, ಪಂಚಾಯತ್ ರಾಜ್ ಎಂಜಿನಿಯರಿAಗ್ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಸುರೇಶ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ಆಯಾ ಗ್ರಾಮಸ್ಥರು ಹಾಜರಿದ್ದರು.