ಹೊಸಳ್ಳಿ ಬಳಿ ಭೀಕರ ಅಪಘಾತ ; ಇಬ್ಬರು ದುರ್ಮರಣ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 17- ತಾಲೂಕಿನ ಹುಲಿಗಿ ಗ್ರಾಮದ ಶ್ರೀ ಹುಲಿಗೆಮ್ಮ ದೇವರ ದರ್ಶನಕ್ಕೆ ಹೋಗಿದ್ದ ಇಬ್ಬರು ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ದೇವಸ್ಥಾನದಿಂದ ಮರಳಿ ಊರಿಗೆ ಹೋಗುವ ವೇಳೆ ತಾಲೂಕಿನ ಹೊಸಳ್ಳಿ ಗ್ರಾಮದ ಹೆದ್ದಾರಿಯಲ್ಲಿ ಟ್ಕ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ ಹೊಡೆದಿದ ಪರಿಣಾಮವಾಗಿ ಈ ಘಟನೆ ಸಂಭವಿಸಿದೆ.
ಶುಕ್ರವಾರ ದೇವಿ ದರ್ಶನ ಮುಗಿಸಿಕೊಂಡು ಟ್ರ್ಯಾಕ್ಟರ್ ನಲ್ಲಿ ಮರಳಿ ತಮ್ಮೂರಿಗೆ ಹೋಗುತ್ತಿದ್ದರು ಹಿಂದಿನಿಂದ ಬಂದು ಖಾಸಗಿ ಡಿಕ್ಕಿ ಹೊಡೆದಿದ್ದರಿಂದ ಇಬ್ಬರು ಮೃತಪಟ್ಟು ಹದಿನೈದಕ್ಕೂ ಹೆಚ್ಚು ಜನರಿಗೆ ಗಾಯವಾಗಿದೆ.
ಗಾಯಾಳುಗಳು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರು ಯಲಬರ್ಗಾ ತಾಲೂಕಿನ ಕರಮುಡಿ ಗ್ರಾಮದ ನಿವಾಸಿಗಳು ಎಂದು ತಿಳಿದು ಬಂದಿದೆ.ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
