
10 ರಂದು ರಾಜ್ಯ ಮಾನವ ಹಕ್ಕುಗಳ ಆಯೋಗದಿಂದ ಜಿಲ್ಲಾ ಪ್ರವಾಸ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 4- ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರ ತಂಡವು ಜುಲೈ 10 ರಂದು ಕೊಪ್ಪಳ ಜಿಲ್ಲೆಯಲ್ಲಿ ಒಂದು ದಿನದ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಜುಲೈ 10 ರಂದು ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರ ತಂಡವು ಬೆಳಿಗ್ಗೆ 09.30 ಗಂಟೆಗೆ ಗದಗನಿಂದ ನಿರ್ಗಮಿಸಿ ರಸ್ತೆ ಮಾರ್ಗವಾಗಿ 11.30 ಗಂಟೆಗೆ ಕೊಪ್ಪಳಕ್ಕೆ ಆಗಮಿಸುವರು. ಮಧ್ಯಾಹ್ನ 12 ಗಂಟೆಯಿಂದ 01 ಗಂಟೆಯವರೆಗೆ ಜಿಲ್ಲಾ ಪಂಚಾಯತಿಯ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸುವರು. ಮಧ್ಯಾಹ್ನ 02 ಗಂಟೆಯಿAದ ಸಂಜೆ 07 ಗಂಟೆಯವರೆಗೆ ಸಿಟ್ಟಿಂಗ್ಸ್ ಹಾಗೂ ಸ್ಥಳೀಯ ಪರಿವೀಕ್ಷಣೆ ನಡೆಸುವರು.
ಸಂಜೆ 07.30 ಗಂಟೆಗೆ ಕೊಪ್ಪಳದಿಂದ ನಿರ್ಗಮಿಸಿ ರಸ್ತೆ ಮಾರ್ಗವಾಗಿ 08 ಗಂಟೆಗೆ ಮುನಿರಾಬಾದ್ಗೆ ತೆರಳಿ ಮುನಿರಾಬಾದ್ನ ವೈಕುಂಠ ಅತಿಥಿ ಗೃಹದಲ್ಲಿ ವಾಸ್ತವ್ಯ ಮಾಡುವರು ಎಂದು ಆಯೋಗದ ಪ್ರಕಟಣೆ ತಿಳಿಸಿದೆ.