
ಕಳಕಪ್ಪ ಕಂಬಳಿ ಕಾಂಗ್ರೆಸ್ಸಿಗೆ ಬಾಹ್ಯ ಬೆಂಬಲ
ಕರುನಾಡ ಬೆಳಗು ಸುದ್ದಿ
ಕುಕುನೂರು, 25- ಬಿಜೆಪಿ ಪಕ್ಷದ ಪ್ರಭಾವಿ ನಾಯಕ ಕಳಕಪ್ಪ ಕಂಬಳಿ ಅವರು ಭಾರತೀಯ ಜನತಾ ಪಾರ್ಟಿಗೆ ಶೀಘ್ರದಲ್ಲಿ ರಾಜೀನಾಮೆ ನೀಡಿ ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಬಾಹ್ಯ ಬೆಂಬಲ ನೀಡುವುದಾಗಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಕಳಕಪ್ಪ ಕಂಬಳಿ ಅವರು ಮೂಲತಃ ಕಾಂಗ್ರೆಸ್ ಪಕ್ಷದವರು. ಕಳೆದ ಮೂರು ವರ್ಷಗಳ ಹಿಂದೆ ಕಾಂಗ್ರೆಸ್ ಪಕ್ಷವನ್ನು ಬಿಟ್ಟು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡು ಬಿಜೆಪಿ ಪಕ್ಷದ ಸಂಘಟನೆಗಾಗಿ ಸಾಕಷ್ಟು ಸ್ರವಿಸಿದ್ದಾರೆ.
ಬಿಜೆಪಿ ಪಕ್ಷದ ಹಿರಿಯ ಮುಖಂಡರು ಇವರನ್ನು ಪರಿಗಣಿಸದೆ ಸೂಕ್ತ ಸ್ಥಾನಮಾನ ಕೊಡದೇ ಇದ್ದಕ್ಕಾಗಿ ಅವರು ಈಗ ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ್ ಹಿಟ್ನಾಳ್ ಅವರಿಗೆ ತಮ್ಮ ವೈಯಕ್ತಿಕ ಬಾಹ್ಯ ಬೆಂಬಲವನ್ನು ನೀಡುವುದಾಗಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.