
ಮೇ 6, 7ರಂದು ಜಿಲ್ಲೆಯ ವಿವಿಧೆಡೆ ಬಸ್ ಸಂಚಾರದಲ್ಲಿ ವ್ಯತ್ಯಯ
ಕರುನಾಡ ಬೆಳಗು ಸುದ್ದಿ
ವಿಜಯನಗರ, 5- ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ನಿಮಿತ್ಯ ಚುನಾವಣಾ ಕಾರ್ಯಕ್ಕೆ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಗೆ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಹೊಸಪೇಟೆ ವಿಭಾಗದಿಂದ ಕರಾರು ಒಪ್ಪಂದದ ಮೇಲೆ 208 ವಾಹನಗಳನ್ನು ಒದಗಿಸಲಾಗಿರುವುದರಿಂದ ಜಿಲ್ಲೆಯ ವಿವಿಧೆಡೆ ಬಸ್ ಸಂಚಾರದಲ್ಲಿ ಮೇ 6 ಹಾಗೂ ಮೇ 7ರಂದು ಹೊಸಪೇಟೆ, ಕೂಡ್ಲಿಗಿ, ಕೊಟ್ಟೂರು, ಹೂವಿನಹಡಗಲಿ, ಹಗರಿಬೊಮ್ಮನಹಳ್ಳಿ ಹಾಗೂ ಹರಪನಹಳ್ಳಿ ತಾಲೂಕುಗಳಿಂದ ವಿವಿಧ ಸ್ಥಳಗಳಿಗೆ ತೆರಳುವ ಬಸ್‌ಗಳ ದೈನಂದಿನ ಕಾರ್ಯಚರಣೆಯಲ್ಲಿ ವ್ಯತ್ಯಯವಾಗಲಿರುವ ಕಾರಣ ಪ್ರಯಾಣಿಕರು ಸಹಕರಿಸಲು ಕೋರಲಾಗಿದೆ ಎಂದು ಹೊಸಪೇಟೆ ವಿಭಾಗದ ಕಕರಸಾ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.