WhatsApp Image 2024-11-21 at 4.17.31 PM

ಶಿಕ್ಷಣ, ಮಾನವತೆ, ಸಂಸ್ಕೃತಿ ಉಳಿಸಿ ಘೋಷವಾಕ್ಯ
ಎಐಡಿಎಸ್‌ಓ ವಿದ್ಯಾರ್ಥಿ ಸಂಘಟನೆಯ 10ನೇ ಅಖಿಲ ಭಾರತ ವಿದ್ಯಾರ್ಥಿ ಸಮ್ಮೇಳನ

ಕರುನಾಡ ಬೆಳಗು ಸುದ್ದಿ

ಬಳ್ಳಾರಿ, 21- ಈ ಹಿನ್ನೆಲೆಯಲ್ಲಿ ಬಳ್ಳಾರಿಯ ಮರ್ಚೆಡ್ ರೆಸಿಡೆಸ್ಸಿಯಲ್ಲಿ ಪತ್ರಿಕಾಗೋಷ್ಠಿಯನ್ನು ನಡೆಸಲಾಯಿತು, ಈ ಸಂದರ್ಭದಲ್ಲಿ ಎಐಡಿಎಸ್‌ಓ ಜಿಲ್ಲಾ ಕಾರ್ಯದರ್ಶಿ ಕಂಬಳಿ ಮಂಜುನಾಥ ಅವರು ಮಾತನಾಡಿ ನಮ್ಮ ದೇಶದ ನವೋದಯ ಚಳುವಳಿಯ ಮೂಲ ಉದ್ದೇಶ ಎಲ್ಲಾ ಹಳೆಯ ಕಂದಚಾರ, ಮೌಡ್ಯ, ಮತಾಂಧತೆಗಳಿAದ ಮುಕ್ತಗೊಳಿಸುವುದಾಗಿತ್ತು. ಸ್ವಾತಂತ್ರö್ಯ ಸಂಗ್ರಾಮದ ಮಹಾನ್ ಕ್ರಾಂತಿಕಾರಿಗಳಾದ ಭಗತ್ ಸಿಂಗ್, ನೇತಾಜಿ ಅವರು ರಾಜಕೀಯ, ಆರ್ಥಿಕ, ಸಾಂಸ್ಕೃತಿಕ, ಸಾಮಾಜಿಕವಾಗಿ ಮೂಲಭೂತ ಬದಲಾವಣೆ ತರುವ ಕನಸು ಹೊತ್ತು, ಎಲ್ಲರಿಗೂ ಶಿಕ್ಷಣ, ಆರೋಗ್ಯ, ಉದ್ಯೋಗ ಒದಗಿಸಿ, ಯಾವ ಹೆಣ್ಣು ಮಗುವು ಅಭದ್ರತೆಯಿಂದ ಬಳಲದ ಸಮ ಸಮಾಜವನ್ನು ನಿರ್ಮಿಸುವ ಮಹಾನ್ ಧ್ಯೇಯದೊಂದಿಗೆ ಹೋರಾಡಿದರು ಎಂದು ಹೇಳಿದರು.

ಸ್ವಾತಂತ್ರö್ಯ ನಂತರ ಅಧಿಕಾರಕ್ಕೆ ಬಂದ ಎಲ್ಲ ಸರ್ಕಾರಗಳು ಶಿಕ್ಷಣಕ್ಕೆ ಅನುದಾನ ಕಡಿತಗೊಳಿಸುತ್ತಾ ಬಂದಿವೆ. ಎನ್‌ಇಪಿ ಶಿಕ್ಷಣ ನೀತಿಯು ಜಾರಿಯಾದ ಮೊದಲ ಹಂತದಲ್ಲೇ ೧೩,೮೦೦ ಸರ್ಕಾರಿ ಶಾಲೆಗಳನ್ನು ವಿಲೀನೀಕರಣದ ಹೆಸರಿನಲ್ಲಿ ಮುಚ್ಚಲು ಆದೇಶ ಹೊರಡಿಸಿತು. ನಾಲ್ಕು ವರ್ಷದ ಪದವಿಯು ಜಾರಿಯಾಯಿತು. ಎಐಡಿಎಸ್‌ಓ ನಾಯಕತ್ವದಡಿಯಲ್ಲಿ ೩೭ ಲಕ್ಷಕ್ಕೂ ಹೆಚ್ಚು ಸಾರ್ವಜನಿಕರು ಜನಸಾಮಾನ್ಯರು ಸಹಿ ಹಾಕುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರ ಎನ್‌ಇಪಿ ೨೦೨೦ಯನ್ನು ಕರ್ನಾಟಕದಲ್ಲಿ ರದ್ದುಗೊಳಿಸಬೇಕಾಯಿತು. ಈ ಅಭೂತಪೂರ್ವ ವಿಜಯವು, ದೇಶಕ್ಕೆ ಮಾದರಿಯಾಗುವಂತಿದೆ ಎಂದು ಹೇಳಿದರು.

ಈಗ ನಮ್ಮ ಮುಂದಿರುವ ದೊಡ್ಡ ಸವಾಲೆಂದರೆ ಎನ್.ಈ.ಪಿಯು ದೇಶದ ಯಾವ ಮೂಲೆಯಲ್ಲೂ ಜಾರಿಯಾಗದಂತೆ ತಡೆಯಲು ವಿದ್ಯಾರ್ಥಿಗಳ ಸಂಘಟಿತ ಹೋರಾಟ ಬೆಳೆಸುವುದಾಗಿದೆ. ಸಮಾಜದಲ್ಲಿ ಕುಸಿಯುತ್ತಿರುವ ಸಾಂಸ್ಕೃತಿಕ ಮಟ್ಟ ಹಾಗೂ ಮಹಿಳೆಯರ ಮೇಲೆ ದಿನೇದಿನೇ ಹೆಚ್ಚುತ್ತಿರುವ ಅಪರಾಧಗಳ ವಿರುದ್ಧ ಸಾಂಸ್ಕೃತಿಕ ಚಳುವಳಿಯನ್ನು ಹರಿ ಬಿಡಬೇಕಿದೆ. ಸಾರ್ವಜನಿಕ ಶಿಕ್ಷಣವನ್ನು ಉಳಿಸುವ, ಮಾನವತೆ ಮತ್ತು ಸಂಸ್ಕೃತಿಯನ್ನು ಉಳಿಸುವ ಘೋಷವಾಕ್ಯಗಳು ಮೊಳಗಿಸಿ, ಉತ್ತಮ ಸಮಾಜ ನಿರ್ಮಿಸುವ ಉದಾತ್ತ ಜವಬ್ದಾರಿ ನಮ್ಮ ಮೇಲಿದೆ ಎಂದರು.

ಈ ಐತಿಹಾಸಿಕ ಅವಶ್ಯಕತೆಗಾಗಿ ವಿದ್ಯಾರ್ಥಿ ಹೋರಾಟಗಳನ್ನು ಇನ್ನಷ್ಟು ಬಲಿಷ್ಟಗೊಳಿಸಲು ಎಐಡಿಎಸ್‌ಓ ೧೦ನೇ ಅಖಿಲ ಭಾರತ ಸಮ್ಮೇಳನವನ್ನು ದೇಶದ ರಾಜಧಾನಿ ದೆಹಲಿಯಲ್ಲಿ ನವೆಂಬರ್ ೨೭, ೨೮, ೨೯ ರಂದು ಹಮ್ಮಿಕೊಳ್ಳಲಾಗಿದೆ. ಶಿಕ್ಷಣ ಪ್ರೇಮಿ ಜನತೆ, ಶಿಕ್ಷಕರು, ಪೋಷಕರು, ವಿದ್ಯಾರ್ಥಿಗಳು ದೊಡ್ಡ ಸಂಖ್ಯೆಯಲ್ಲಿ ಈ ಸಮ್ಮೇಳನದ ಕರೆಗೆ ಓಗೊಟ್ಟು, ಅಖಿಲ ಭಾರತ ಸಮ್ಮೇಳನವನ್ನು ಯಶಸ್ವಿಗೊಳಿಸಲು ಎಐಡಿಎಸ್‌ಓ ಜಿಲ್ಲಾ ಸಮಿತಿಯು ಈ ಮೂಲಕ ಮನವಿ ಮಾಡುತ್ತದೆ.
ಶಾಲಾ ಕಾಲೇಜುಗಳಲ್ಲಿ ಎಲ್ಲಾ ಹಂತದ ಶುಲ್ಕ ಏರಿಕೆಯನ್ನು ತಡೆಗಟ್ಟಿ!, ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸಿ, ಮುಚ್ಚಿದ ಶಾಲೆಗಳನ್ನು ಪುನರಾರಂಭಿಸಿ!, ಖಾಲಿ ಇರುವ ಎಲ್ಲಾ ಬೋಧಕ ಮತ್ತು ಬೋಧಕೇತರ ಹುದ್ದೆಗಳನ್ನು ಕೂಡಲೇ ಖಾಯಂ ಆಧಾರದ ಮೇಲೆ ಭರ್ತಿ ಮಾಡಿ, ಓಖಿಂ ರದ್ದುಗೊಳಿಸಿ ಮತ್ತು ಎಲ್ಲಾ ಪರೀಕ್ಷಾ ಅಕ್ರಮಗಳ ಕುರಿತು ಪರಿಣಾಮಕಾರಿ ತನಿಖೆ ನಡೆಸಿ!, ವೈದ್ಯಕೀಯ ಶಿಕ್ಷಣದಲ್ಲಿ ಅವೈಜ್ಞಾನಿಕ ಅಃಒಇ ಅನುಷ್ಠಾನಗೊಳಿಸುವುದನ್ನು ನಿಲ್ಲಿಸಿ ಮತ್ತು ಓಇಘಿಖಿನ್ನು ರದ್ದುಗೊಳಿಸಿ, ನಾಲ್ಕು ವರ್ಷದ ಪದವಿಯನ್ನು ತಿರಸ್ಕರಿಸಿ, ಶಿಕ್ಷಣದ ವ್ಯಾಪಾರೀಕರಣ, ಖಾಸಗೀಕರಣ, ಕೇಂದ್ರೀಕರಣ, ವೃತ್ತಿಪರೀಕರಣದ ನೀಲಿನಕ್ಷೆಯಾಗಿರುವ ಎನ್‌ಈಪಿ-೨೦೨೦ನ್ನು ರದ್ದುಗೊಳಿಸಿ ಮತ್ತು ಶಿಕ್ಷಣದಲ್ಲಿ ಕೋಮುವಾದೀಕರಣವನ್ನು ತಡೆಗಟ್ಟಿ, ಎಲ್ಲಾ ಸಂಶೋಧನಾ ವಿದ್ಯಾರ್ಥಿಗಳಿಗೆ ತಾರತಮ್ಯವಿಲ್ಲದೆ ಗೌರವಾನ್ವಿತ ಮತ್ತು ನಿಯಮಿತ ಫೆಲೋಶಿಪ್ ಅನ್ನು ನೀಡಲು ಕ್ರಮಕೈಗೊಳ್ಳಲಿ, ನವೋದಯದ ಹರಿಕಾರರು ಮತ್ತು ಸ್ವಾತಂತ್ರö್ಯ ಹೋರಾಟಗಾರರ ಜೀವನ ಹೋರಾಟಗಳನ್ನು ಪಠ್ಯಕ್ರಮದಲ್ಲಿ ಸೇರಿಸಿ! ಅವೈಜ್ಞಾನಿಕ ವಿಚಾರಗಳನ್ನು ಹರಡುವ ಮತ್ತು ಐತಿಹಾಸಿಕ ಸತ್ಯಗಳನ್ನು ವಿರೂಪಗೊಳಿಸುವುದನ್ನು ನಿಲ್ಲಿಸಿ, ಸರ್ಕಾದ ಎಲ್ಲರಿಗೂ ಉದ್ಯೋಗವನ್ನು ಖಾತ್ರಿಪಡಿಸಬೇಕು, ಶಿಕ್ಷಣಕ್ಕಾಗಿ ಕೇಂದ್ರ ಬಜೆಟ್ ನಲ್ಲಿ ೧೦% ಮತ್ತು ರಾಜ್ಯ ಬಜೆಟ್‌ನಲ್ಲಿ ೩೦% ಮೀಸಲಿಡಿ. ಒಟ್ಟು ಜಿಡಿಪಿಯ ೩% ಮತ್ತು ಬಜೆಟ್‌ನಲ್ಲಿ ೩%ನ್ನು ಸಂಶೋಧನೆಗಾಗಿ ನಿಗದಿಪಡಿಸಿ, ಕ್ಯಾಂಪಸ್‌ಗಳ ಒಳಗೆ ಮತ್ತು ಹೊರಗೆ ಮಹಿಳೆಯರು, ವಿದ್ಯಾರ್ಥಿನಿಯರು ಮತ್ತು ಅವರ ಘನತೆಯ ರಕ್ಷಣೆಯನ್ನು ಖಾತ್ರಿಪಡಿಸಿ, ಲಿಂಗ್ಡೊ ಆಯೋಗದ ಶಿಫಾರಸ್ಸುಗಳನ್ನು ರದ್ದುಗೊಳಿಸಿ ಮತ್ತು ವಿದ್ಯಾರ್ಥಿ ಸಂಘದ ಚುನಾವಣೆಗಳನ್ನು ಎಲ್ಲ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ಮರು-ಪರಿಚಯಿಸಿ, ಎಲ್ಲಾ ಶೈಕ್ಷಣಿಕ ಕ್ಯಾಂಪಸ್‌ಗಳಲ್ಲಿ ಪ್ರಜಾಸತ್ತಾತ್ಮಕ ಹಕ್ಕುಗಳು ಮತ್ತು ಮುಕ್ತ ಪ್ರಜಾತಾಂತ್ರಿಕ ವಾತಾವರಣವನ್ನು ಖಚಿತಪಡಿಸಿ.

ಈ ಪತ್ರಿಕಾ ಘೋಷ್ಠಿಯಲ್ಲಿ ಎಐಡಿಎಸ್‌ಓ ಬಳ್ಳಾರಿ ಜಿಲ್ಲಾ ಉಪಾಧ್ಯಕ್ಷರುಗಳಾದ ಎಂ.ಶಾAತಿ, ಉಮಾದೇವಿ, ಪ್ರಮೋದ್ ಹಾಗೂ ಜಿಲ್ಲಾ ಖಜಾಂಚಿಗಳಾದ ಅನುಪಮ ಇದ್ದರು.

Leave a Reply

Your email address will not be published. Required fields are marked *

error: Content is protected !!