11 ರಂದು ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ
ಕರುನಾಡ ಬೆಳಗು ಸುದ್ದಿ
ಕೊಪ್ಪಳ,10- ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್. ತಂಗಡಗಿ ಅವರು ಮಾರ್ಚ್ 11 ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ಸಚಿವರು ಅಂದು ಬೆಳಿಗ್ಗೆಯಿಂದ ಸಂಜೆ 04 ಗಂಟೆಯವರೆಗೆ ಕಾರಟಗಿಯ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ಸಾರ್ವಜನಿಕರ ಭೇಟಿ ಹಾಗೂ ಕುಂದುಕೊರತೆಗಳನ್ನು ವಿಚಾರಣೆ ನಡೆಸುವರು.
ಸಂಜೆ 04 ಗಂಟೆಗೆ ಕಾರಟಗಿಯಿಂದ ನಿರ್ಗಮಿಸಿ 05 ಗಂಟೆಗೆ ಆನೆಗುಂದಿಗೆ ಆಗಮಿಸುವರು. ಆನೆಗೊಂದಿಯಲ್ಲಿ ನಡೆಯಲಿರುವ ಆನೆಗೊಂದಿ ಉತ್ಸವದಲ್ಲಿ ಭಾಗವಹಿಸುವರು.
ಸಂಜೆ 06.30 ಗಂಟೆಗೆ ಆನೆಗೊಂದಿಯಿಂದ ನಿರ್ಗಮಿಸಿ, ರಸ್ತೆ ಮೂಲಕ ಹೊಸಪೇಟೆ, ಚಿತ್ರದುರ್ಗ ಮಾರ್ಗವಾಗಿ ಬೆಂಗಳೂರು ಕಡೆಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
