ಕಾರಟಗಿ ಪುರಸಭೆ

                          ಡೇ ನಲ್ಮ್ ಯೋಜನೆಯಡಿ ಅರ್ಜಿ ಆಹ್ವಾನ

ಕರುನಾಡ ಬೆಳಗು ಸುದ್ದಿ
ಕೊಪ್ಪಳ, 07- 2023-24ನೇ ಸಾಲಿನ ದೀನದಯಾಳ್ ಅಂತ್ಯೋದಯ ಯೋಜನೆ-ನಲ್ಮ್ ಅಭಿಯಾನದಡಿ ಕಾರಟಗಿ ಪುರಸಭೆಗೆ ಸ್ವಯಂ ಉದ್ಯೋಗಕ್ಕಾಗಿ ಸಾಲ ಸೌಲಭ್ಯಕ್ಕಾಗಿ 7 ಜನ ಫಲಾನುಭವಿಗಳಿಗೆ ಹಾಗೂ ಸ್ವ-ಸಹಾಯ ಸಂಘಗಳ ರಚನೆ 16 ಹಾಗೂ ಸ್ವ-ಸಹಾಯ ಸಂಘಗಳ ಬ್ಯಾಂಕ್ ಲಿಂಕೇಜ್ 07 ಗುರಿಯನ್ನು ನಿಗದಿಪಡಿಸಿದ್ದು, ಅದರಂತೆ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ.
ಇಚ್ಛೆಯುಳ್ಳ ಫಲಾನುಭವಿಗಳು ಆಧಾರ್ ಕಾರ್ಡ್, ಪ್ರಸಕ್ತ ಸಾಲಿನ ಜಾತಿ ಮತ್ತು ಆದಾಯ ಪತ್ರ, ವಿದ್ಯಾರ್ಹತೆ ಪ್ರಮಾಣ ಪತ್ರ, ಮತದಾರರ ಗುರುತಿನ ಚೀಟಿ, ಬಿ.ಪಿ.ಎಲ್ ರೇಶನ್ ಕಾರ್ಡ್, ಬ್ಯಾಂಕ್ ಪಾಸ್‌ಬುಕ್ ಪ್ರತಿಗಳನ್ನು ದೃಢೀಕರಿಸಿ ಹಾಗೂ ಪಾಸ್‌ಪೋರ್ಟ್ ಅಳತೆಯ 2 ಭಾವಚಿತ್ರಗಳೊಂದಿಗೆ ಭರ್ತಿ ಮಾಡಿದ ಅರ್ಜಿಗಳನ್ನು ದ್ವಿಪ್ರತಿಯಲ್ಲಿ ನವೆಂಬರ್ 22 ರೊಳಗೆ ಕಾರ್ಯಾಲಯಕ್ಕೆ ಸಲ್ಲಿಸಬೇಕು. ತಡವಾಗಿ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಕಾರ್ಯಾಲಯದ ವೇಳೆಯಲ್ಲಿ ವಿಷಯ ನಿರ್ವಾಹಕರನ್ನು ಸಂಪರ್ಕಿಸಬಹುದು ಎಂದು ಪುರಸಭೆ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!