12ರಿಂದ ಲೋಕಾಯುಕ್ತ ಜನ ಸಂಪರ್ಕ ಸಭೆ
ಕರುನಾಡ ಬೆಳಗು ಸುದ್ದಿ
ವಿಜಯನಗರ, 11- ಕರ್ನಾಟಕ ಲೋಕಾಯುಕ್ತ ಹೊಸಪೇಟೆ ಘಟಕದಿಂದ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರ ನೇತೃತ್ವದಲ್ಲಿ ಜೂನ್ ಮಾಹೆಯಲ್ಲಿ ವಿವಿಧೆಡೆ ಲೋಕಾಯುಕ್ತ ಜನ ಸಂಪರ್ಕ ಸಭೆಗಳು ನಡೆಯಲಿವೆ.
ಜೂನ್ 12ರಂದು ಬೆಳಗ್ಗೆ 11 ಗಂಟೆಯಿAದ ಮಧ್ಯಾಹ್ನ 1 ಗಂಟೆವರೆಗೆ ಕೊಟ್ಟೂರು ತಾಲೂಕು ಕಚೇರಿ ಸಭಾಂಗಣದಲ್ಲಿ, ಜೂನ್ 20ರಂದು ಬೆಳಗ್ಗೆ 11 ಗಂಟೆಯಿAದ ಮಧ್ಯಾಹ್ನ 1 ಗಂಟೆವರೆಗೆ ಕೂಡ್ಲಿಗಿ ತಾಲೂಕು ಕಚೇರಿ ಸಭಾಂಗಣದಲ್ಲಿ, ಜೂನ್ 25ರಂದು ಬೆಳಗ್ಗೆ 11 ಗಂಟೆಯಿAದ ಮಧ್ಯಾಹ್ನ 1 ಗಂಟೆವರೆಗೆ ಹರಪನಹಳ್ಳಿ ತಾಲೂಕು ಕಚೇರಿ ಸಭಾಂಗಣದಲ್ಲಿ ಸಭೆಗಳು ನಡೆಯಲಿದ್ದು, ಸಾರ್ವಜನಿಕರು ತಮ್ಮ ಕುಂದು ಕೊರತೆಗಳು, ಅಹವಾಲುಗಳು ಹಾಗೂ ತಮ್ಮ ಸರಕಾರಿ ಕೆಲಸಗಳಿಗೆ ಸಂಬAಧಿಸಿದAತೆ ಸರ್ಕಾರಿ ಕಚೇರಿಗಳಲ್ಲಿ ಅನಗತ್ಯ ವಿಳಂಬತೆ, ಕಿರುಕುಳ, ತೊಂದರೆ ಮತ್ತು ಅಧಿಕಾರಿ ಸಿಬ್ಬಂದಿಯ ದುರಾಡಳಿತಕ್ಕೆ ಸಂಬAಧಿಸಿದ ದೂರುಗಳನ್ನು ಸಂಬAಧಿಸಿದ ತಾಲೂಕುಗಳಲ್ಲಿ ಆಯಾ ದಿನಾಂಕದAದು ದ್ವಿಪ್ರತಿಯಲ್ಲಿ ದೂರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಕರ್ನಾಟಕ ಲೋಕಾಯುಕ್ತ ಹೊಸಪೇಟೆ ಘಟಕದ ಪೊಲೀಸ್ ಉಪಾಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
