14ರಂದು ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ
ಕರುನಾಡ ಬೆಳಗು ಸುದ್ದಿ
ವಿಜಯನಗರ, 10- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇವರ ಸಂಯುಕ್ತಾಶ್ರಯದಲ್ಲಿ ಸಂವಿಧಾನ ಶಿಲ್ಪಿ ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 133ನೇ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಏಪ್ರಿಲ್ 14ರ ಬೆಳಗ್ಗೆ 9.15ಕ್ಕೆ ಹೊಸಪೇಟೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ಅವರ ವೃತ್ತದಲ್ಲಿರುವ ಪುತ್ಥಳಿಗೆ ಮಾಲಾರ್ಪಣೆ ಹಾಗೂ ಪೂಜಾ ಕಾರ್ಯಕ್ರಮ ನಡೆಯಲಿದೆ.
ವಿಜಯನಗರ ಜಿಲ್ಲೆಯ ಎಲ್ಲಾ ಸಮುದಾಯದ ಸಂಘ-ಸಂಸ್ಥೆಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು, ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ, ಹೊಸಪೇಟೆ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ವಿಜಯನಗರ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಶ್ರೀ ಮಂಜುನಾಥ ಹೆಚ್.ವಿ. ಅವರು ಮನವಿ ಮಾಡಿದ್ದಾರೆ.
