2c136fae-be38-4577-97e1-318669006cc9

ಫೆ.17ರಂದು ಶ್ರೀ ಜಗಜ್ಯೋತಿ ಬಸವಣ್ಣನವರ ಭಾವಚಿತ್ರ ಅನಾವರಣ

ಕರುನಾಡ ಬೆಳಗು ಸುದ್ದಿ

ಕೊಪ್ಪಳ,15- ಕರ್ನಾಟಕದ ಸಾಂಸ್ಕೃತಿಕ ನಾಯಕರಾದ “ಶ್ರೀ ಜಗಜ್ಯೋತಿ ಬಸವಣ್ಣನವರ” ಭಾವಚಿತ್ರ ಅನಾವರಣ ಸಮಾರಂಭವನ್ನು ಫೆಬ್ರವರಿ 17 ರಂದು ಕೊಪ್ಪಳ ಜಿಲ್ಲೆಯಾದ್ಯಂತ ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ತಿಳಿಸಿದ್ದಾರೆ.

12ನೇ ಶತಮಾನದಲ್ಲಿ ಕ್ರಾಂತಿಯೋಗಿ ಶ್ರೀ ಜಗಜ್ಯೋತಿ ಬಸವಣ್ಣನವರು ಪ್ರತಿಪಾದಿಸಿದ ಸಾರ್ವತ್ರಿಕ ಮೌಲ್ಯಗಳಾದ ಜಾತಿ ರಹಿತ ಸಮಾಜ, ಕಾಯಕದ ಮಹತ್ವ ಮತ್ತು ವರ್ಗರಹಿತ ಸಮಾಜ, ಜೀವನ ಮಾರ್ಗ, ಸರ್ವಕಾಲಕ್ಕೂ ದಾರಿದೀಪವಾಗಿದೆ. ಬಸವಣ್ಣನವರು ಸಮಾಜದಲ್ಲಿ ಮಹಿಳಾ ಅಸಮಾನತೆ ಹಾಗೂ ಮೂಢನಂಬಿಕೆಗಳ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದರು.

ಜಗಜ್ಯೋತಿ ಬಸವಣ್ಣನವರು ಸಾರ್ವತ್ರಿಕ ಮತ್ತು ಸಾರ್ವಕಾಲಿಕ ಸರ್ವಜನ ಸಮಭಾವದ ತಾತ್ವಿಕತೆಗಳ ಮೂಲಕ ಕಲ್ಯಾಣ ಸಮಾಜವನ್ನು ಕಟ್ಟುವುದಕ್ಕೆ ಬೇಕಾದ ನೀತಿಯನ್ನು ಬೋಧಿಸಿರುವುದರಿಂದ ನಮ್ಮ ದೇಶದ ಸಂವಿಧಾನದ ಆಶಯಗಳಿಗೆ ಅವರ ಚಿಂತನೆಗಳು ಸಾಂಸ್ಕೃತಿಕ ರಾಯಭಾರಿತ್ವಕ್ಕೆ ಸಮರ್ಥನೀಯವಾದ ನೆಲೆ ಒದಗಿಸಿರುವ ಮೇರೆಗೆ ರಾಜ್ಯ ಸರ್ಕಾರದ ಆದೇಶದಲ್ಲಿ ಶ್ರೀ ಜಗಜ್ಯೋತಿ ಬಸವಣ್ಣನವರನ್ನು “ಕರ್ನಾಟಕದ ಸಾಂಸ್ಕೃತಿಕ ನಾಯಕ” ಎಂದು ಘೋಷಿಸಲಾಗಿದೆ.

ವಿಶ್ವಗುರು ಶ್ರೀ ಬಸವಣ್ಣನವರ ಭಾವಚಿತ್ರವನ್ನು ಮುಖ್ಯಮಂತ್ರಿಗಳು ಈಗಾಗಲೇ (ಫೆ.13ರಂದು) ವಿಧಾನಸೌಧದಲ್ಲಿ ಅನಾವರಣಗೊಳಿಸಿದ್ದಾರೆ. ಅದರಂತೆ ಫೆಬ್ರವರಿ 17ರಂದು ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ, ತಾಲ್ಲೂಕು ಕೇಂದ್ರಗಳಲ್ಲಿ ಸ್ಥಳೀಯ ಶಾಸಕರುಗಳ ನೇತೃತ್ವದಲ್ಲಿ ಭಾವಚಿತ್ರ ಅನಾವರಣಗೊಳಿಸುವ ಕಾರ್ಯಕ್ರಮವನ್ನು ಆಯೋಜಿಸಲು ರಾಜ್ಯ ಸರ್ಕಾರವು ಸೂಚಿಸಿದೆ.

ಈ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ್ ಎಸ್. ತಂಗಡಗಿ ಅವರ ನೇತ್ರತ್ವದಲ್ಲಿ ಫೆ.17ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಕರ್ನಾಟಕದ ಸಾಂಸ್ಕೃತಿಕ ನಾಯಕರಾದ “ಶ್ರೀ ಜಗಜ್ಯೋತಿ ಬಸವಣ್ಣನವರ” ಭಾವಚಿತ್ರ ಅನಾವರಣ ಸಮಾರಂಭವನ್ನು ಆಯೋಜಿಸಲಾಗಿದ್ದು, ಈ ಕಾರ್ಯಕ್ರಮಕ್ಕೆ ಎಲ್ಲಾ ಜಿಲ್ಲಾ ಮಟ್ಟದ ಇಲಾಖೆಗಳ ಹಾಗೂ ಕಚೇರಿಗಳ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಕಡ್ಡಾಯವಾಗಿ ಭಾಗವಹಿಸುವಂತೆ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಸ್ಥಳೀಯ ಶಾಸಕರುಗಳ ನೇತೃತ್ವದಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸುವಂತೆ ಜಿಲ್ಲಾಧಿಕಾರಿಗಳು ಸಂಬAಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!