ba6f1f0c-a0cb-4f71-b308-9dd51b749c45

ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿ
ಜಿಪಂ ಯೋಜನಾ ನಿರ್ದೇಶಕ ಪಿ.ಪ್ರಮೋದ್

ಕರುನಾಡ ಬೆಳಗು ಸುದ್ದಿ

ಬಳ್ಳಾರಿ,೧೯- ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ 18 ವರ್ಷ ತುಂಬಿದ ಪ್ರತಿಯೊಬ್ಬರೂ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಪಿ.ಪ್ರಮೋದ್ ಅವರು ಹೇಳಿದರು.

ಜಿಲ್ಲಾಡಳಿತ ಮತ್ತು ಜಿಲ್ಲಾ ಸ್ವೀಪ್ ಸಮಿತಿ ಸಹಯೋಗದಲ್ಲಿ ನಗರದ ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ವಿಶೇಷ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ವಿಶೇಷ ನೋಂದಣಿ ಅಭಿಯಾನ ನಡೆಯುತ್ತಿದ್ದು, 18 ವರ್ಷ ತುಂಬಿದ ಪ್ರತಿಯೊಬ್ಬರೂ ಹೊಸದಾಗಿ ನೋಂದಣಿ ಹಾಗೂ ಈಗಾಗಲೇ ನೋಂದಾಯಿಸಿರುವವರು ಹೆಸರು, ವಿಳಾಸ ತಿದ್ದುಪಡಿ ಸಂಬಂಧಿಸಿದಂತೆ ನಿಮ್ಮ ಹತ್ತಿರದ ಬೂತ್ ಮಟ್ಟದ ಅಧಿಕಾರಿಗಳನ್ನು ಸಂಪರ್ಕಿಸಬಹುದು. ಮನೆಯ ಸುತ್ತ ಮುತ್ತಲಿನವರಿಗೂ ಮತ್ತು ನಿಮ್ಮ ಊರಿನವರಿಗೂ ಇದರ ಬಗ್ಗೆ ಅರಿವು ಮೂಡಿಸಬೇಕು ಎಂದು ತಿಳಿಸಿದರು.

ಚುನಾವಣಾ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ವಿಶೇಷ ನೋಂದಣಿ ಅಭಿಯಾನದ ಜಾಗೃತಿ ಜಾಥಾವು ನಗರದ ಸರಳಾದೇವಿ ಕಾಲೇಜಿನಿಂದ ಆರಂಭಗೊಂಡು ಸಂಗಂ ವೃತ್ತದ ಮಾರ್ಗವಾಗಿ ಗಡಿಗಿ ಚೆನ್ನಪ್ಪ ವೃತ್ತದ ಮೂಲಕ ಮರಳಿ ಕಾಲೇಜಿಗೆ ತಲುಪಿದರು.

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ.ಎಚ್.ಕೆ.ಮಂಜುನಾಥ್ ರೆಡ್ಡಿ, ಇತಿಹಾಸ ವಿಭಾಗದ ಉಪನ್ಯಾಸಕ ರಾಮಂಜಿನಯ್ಯ, ಅರ್ಥಶಾಸ್ತ್ರ ಉಪನ್ಯಾಸಕ ರುದ್ರಗೌಡ, ಶಶಿಕಾಂತ್, ವಿವಿಧ ವಿಭಾಗದ ಮುಖ್ಯಸ್ಥರು, ಭೋದಕ – ಭೋದಕೇತರ ಸಿಬ್ಬಂದಿ, ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಮತ್ತಿತರು ಭಾಗವಹಿಸಿದ್ದರು

Leave a Reply

Your email address will not be published. Required fields are marked *

error: Content is protected !!